

ನವದೆಹಲಿ: ಸನಾತನ ಧರ್ಮದ ಕುರಿತು ಹೇಳಿಕೆ ವಿವಾದಕ್ಕೀಡಾಗಿರುವ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲ ಆರ್.ಎನ್. ರವಿಗೆ ಪತ್ರ ಬರೆದಿರುವುದಾಗಿ ಹಿರಿಯ ಬಿಜೆಪಿ ನಾಯಕ, ಮಾಜಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು ಸ್ಟಾಲಿನ್ ಪುತ್ರ ಉದಯನಿಧಿ ತಮಿಳುನಾಡು ಸರ್ಕಾರದಲ್ಲಿ ಸೃಜನಪಕ್ಷಪಾತದಿಂದ ಸಚಿವ ಸ್ಥಾನ ಪಡೆದಿದ್ಧಾರೆ ಎಂದು ಆರೋಪಿಸಿದ್ದಾರೆ.
ಸೃಜನಪಕ್ಷಪಾತ ಎಸಗಿ ತಮಿಳುನಾಡು ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಸ್ಟಾಲಿನ್ ಅವರ ಪುತ್ರ ಉದಯನಿಧಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ರಾಜ್ಯಪಾಲರಾದ ಆರ್.ಎನ್. ರವಿ ಅವರಿಗೆ ಪತ್ರ ಬರೆದಿದ್ದೇನೆ. ಸನಾತನ ಧರ್ಮದ ಕುರಿತು ಇವರು ಇವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದರೆ ನಾನು ತಮಿಳುನಾಡು ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ನಾನು ಪ್ರಾರಂಭಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸನಾತನ ಧರ್ಮ ಡೆಂಘಿ-ಮಲೇರಿಯಾದಂತೆ, ಅದನ್ನು ತೊಲಗಿಸಬೇಕು ಎಂದು ಹೇಳುವ ಮೂಲಕ ವಿವಾದಕ್ಕೆ ಒಳಗಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, ಮತ್ತೆ ಮತ್ತೆ ಅದನ್ನೇ ಹೇಳುವೆ ಎನ್ನುವ ಮೂಲಕ ವಿವಾದದ ಬೆಂಕಿಗೆ ತುಪ್ಪ ಸುರಿದಿದ್ದಾರೆ.