ಸನಾತನ ಧರ್ಮ ವಿವಾದ; ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್​ಐಆರ್​ ದಾಖಲು!

Untitled design - 2023-09-13T161251.390
Published on

ಮುಂಬೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಪುತ್ರ ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್, ಕಳೆದ ಕೆಲವು ದಿನಗಳ ಹಿಂದೆ ಸನಾತನ ಧರ್ಮದ ವಿರುದ್ಧ ನೀಡಿದ್ದ ಹೇಳಿಕೆಗೆ ಇದೀಗ ಮುಂಬೈ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆಗೆ ದೇಶವ್ಯಾಪಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವ್ಯಾಪಕ ಟೀಕೆಗೆ ಗುರಿಯಾಗಿದ್ದ ಡಿಎಂಕೆ ನಾಯಕನ ವಿರುದ್ಧ ಮುಂಬೈನ ರಾಜಧಾನಿ ಮಹಾರಾಷ್ಟ್ರದಲ್ಲಿ ಎಫ್‌ಐಆರ್ ದಾಖಲಾಗಿದೆ.

ಮುಂಬೈನ ಮೀರಾ ರೋಡ್ ಪೊಲೀಸರು ಐಪಿಸಿ ಸೆಕ್ಷನ್ 153 ಎ ಮತ್ತು 295 ಎ ಅಡಿಯಲ್ಲಿ ಉದಯನಿಧಿ ಸ್ಟಾಲಿನ್​ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉದಯನಿಧಿ ವಿರುದ್ಧ ವಿಶ್ವ ಹಿಂದೂ ಪರಿಷತ್ (VHP) ಮೀರಾ ರೋಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಂಬಂಧಪಟ್ಟ ಅಧಿಕಾರಿ ಕಾನೂನು ಕೋಶದೊಂದಿಗೆ ಚರ್ಚಿಸಿ ಪ್ರಕರಣ ದಾಖಲಿಸಿದ್ದಾರೆ.

ವಿವಾದಕ್ಕೆ ಕಾರಣವೇನು?: ಸೆಪ್ಟೆಂಬರ್ 2 ರಂದು ತಮಿಳುನಾಡಿನ ಚೆನ್ನೈನಲ್ಲಿ ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಉದಯನಿಧಿ ಸ್ಟಾಲಿನ್, "ಕೊರೊನಾ, ಮಲೇರಿಯಾ, ಡೆಂಗ್ಯೂ ವೈರಸ್ ಮತ್ತು ಸೊಳ್ಳೆ ವೈರಸ್​ಗಳನ್ನು ನಿರ್ಮೂಲನೆ ಮಾಡಿದಂತೆ, ಸನಾತನ ಧರ್ಮವನ್ನು ಕೂಡ ನಿರ್ಮೂಲನೆ ಮಾಡಬೇಕು" ಎಂದು ಹೇಳಿದರು. ಸದ್ಯ ಈ ಹೇಳಿಕೆ ಇದೀಗ ದೇಶವ್ಯಾಪಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net