ನಟ ದರ್ಶನ್ ಕೈ ಸರ್ಜರಿ ಸಕ್ಸೆಸ್; ಡಿ ಬಾಸ್..​ ಬೇಗ ಗುಣಮುಖರಾಗಿ ಎಂದ್ರು ಫ್ಯಾನ್ಸ್

darshan
Published on

ಬೆಂಗಳೂರು:  ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ದರ್ಶನ್ ಕೈಗೆ ಸರ್ಜರಿ ಮಾಡಲಾಗಿದ್ದು, ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ದರ್ಶನ್ ಇತ್ತೀಚೆಗೆ ಗಾಯಗೊಂಡಿದ್ದರು. 'ಡೆವಿಲ್' ಸಿನಿಮಾ ಚಿತ್ರೀಕರಣದ ವೇಳೆ ಪೆಟ್ಟಾಗಿತ್ತು. ಎಡಗೈ ನೋವಿನ ನಡುವೆಯೇ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಇದೀಗ ದರ್ಶನ್ ಕೈಗೆ ಶಸ್ತ್ರಚಿಕಿತ್ಸೆ ಆಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ದರ್ಶನ್ ಅಭಿಮಾನಿ ಜತೆ ಕ್ಲಿಕ್ಕಿಸಿಕೊಂಡಿರುವ ಫೋಟೋ ವೈರಲ್ ಆಗುತ್ತಿದೆ.  ಬೇಗ ಗುಣಮುಖರಾಗಿ ಬಾಸ್ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಮಿಲನಾ ಪ್ರಕಾಶ್ ನಿರ್ದೇಶನದ 'ಡೆವಿಲ್' ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಈಗಾಗಲೇ ಸಣ್ಣ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ದೊಡ್ಡ ಸೆಟ್ ಹಾಕಿ ಆಕ್ಷನ್ ಸನ್ನಿವೇಶ ಸೆರೆಹಿಡಿಯಲಾಗಿದೆ. ಚಿತ್ರೀಕರಣದ ವೇಳೆ ದರ್ಶನ್ ಕೈಗೆ ಪೆಟ್ಟಾಗಿತ್ತು. ಕೈ ನೋವಿಗೆ ಪಟ್ಟಿ ಧರಿಸಿ 'ಮ್ಯಾಟ್ನಿ' ಸಿನಿಮಾ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ದರ್ಶನ್ ಹಾಜರಾಗಿದ್ದರು.

ದರ್ಶನ್‌ ಅವರಿಗೆ ಐತಿಹಾಸಿಕ ಸಿನಿಮಾ ಮಾಡುವುದೆಂದರೆ ಅಚ್ಚು ಮೆಚ್ಚು. ಈ ಮೊದಲು ಸಂಗೊಳ್ಳಿ ರಾಯಣ್ಣನಾಗಿ ಅಬ್ಬರಿಸಿದ್ದ ದರ್ಶನ್ ಅವರು ಈಗ ಸಿಂಧೂರ ಲಕ್ಷ್ಮಣನ ಪಾತ್ರ ಮಾಡಲು ಒಪ್ಪಿಕೊಂಡಿದ್ದಾರೆ. ತರುಣ್​ ಸುಧೀರ್​ ಮತ್ತು ದರ್ಶನ್​ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಈ ಸಿನಿಮಾದಲ್ಲಿ ಸಿಂಧೂರ ಲಕ್ಷ್ಮಣನ ಕಥೆ ಇರಲಿದೆ. ದರ್ಶನ್​ ನಟನೆಯ 59ನೇ ಸಿನಿಮಾವಾಗಿ ಈ ಚಿತ್ರ ಮೂಡಿಬರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net