

ಬೆಂಗಳೂರು: ಡ್ರಗ್ಸ್ ಪ್ರಕರಣದ ಆರೋಪಿಗಳಾದ ನಟಿಯರಾದ ರಾಗಿಣಿ ಮತ್ತು ಸಂಜನಾ ಸೇರಿ ಆರು ಮಂದಿಯನ್ನೂ ಮತ್ತೆ ಮೂರು ದಿನ ಸಿಸಿಬಿ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಇಂದು ನ್ಯಾಯಾಧೀಶ ಜಗದೀಶ್ ಅವರು ವಿಚಾರಣೆ ನಡೆಸಿದ್ದರು. ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಮತ್ತೆ ತಮ್ಮ ವಶಕ್ಕೆ ನೀಡುವಂತೆ ಸಿಸಿಬಿ ಕೇಳಿತ್ತು. ಸಿಸಿಬಿ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಸೆಪ್ಟೆಂಬರ್ 14ನೇ ತಾರಿಖಿನವರೆಗೂ ರಾಗಿಣಿ, ಸಂಜನಾ, ರವಿಶಂಕರ್, ನಿಯಾಜ್, ಲೂಮ್ ಪೆಪರ್ ಅವರನ್ನು ಸಿಸಿಬಿ ಕಸ್ಟಡಿಗೆ ನೀಡಿದೆ.
ರಾಗಿಣಿಯವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಸಿಸಿಬಿ ವಶಕ್ಕೆ ನೀಡಬಾರದು ಎಂದು ಅವರ ಪರ ವಕೀಲರು ಮನವಿ ಮಾಡಿದ್ದರು.