

ಬೆಂಗಳೂರು: ಮಾಜಿ ಸಿಎಂ ಎಸ್.ಎಂ. ಕೃಷ್ಣ ಸ್ಮರಣಾರ್ಥ ರಾಷ್ಟ್ರೀಯ ಶ್ರೀಗಂಧ ಬೆಳೆಗಾರರ ಸಮಾವೇಶವನ್ನು, ನಗರದ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ಭಾನುವಾರ (ನ. 29) ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.
ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ, ಅಖಿಲ ಭಾರತ ಶ್ರೀಗಂಧ ಬೆಳೆಗಾರರು, ಸಂಸ್ಕರಣೆದಾರರು ಮತ್ತು ಮಾರುಕಟ್ಟೆದಾರರ ಒಕ್ಕೂಟ, ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಸಹಯೋಗದಲ್ಲಿ ಸಮಾವೇಶ ಆಯೋಜಿಸಲಾಗಿದೆ.
ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.
ಸಿಎಂ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದು, ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಗಂಧ ಬೆಳೆಗಾರರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಆಯೋಜಕರು ಕೋರಿದ್ದಾರೆ.