ವರುಣಾ ಕ್ಷೇತ್ರದಲ್ಲಿ ಫಿಲಂ ಸಿಟಿ ನಿರ್ಮಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ

Film chamber
Published on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ಫಿಲಂ ಸಿಟಿ ನಿರ್ಮಿಸುವಂತೆ ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕರ ಸಂಘ ವಿನಂತಿಸಿದೆ.

ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಎಸ್.ವಿ.ರಾಜೇಂದ್ರಸಿಂಗ್ ಬಾಬು ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ. ರಾಜ್ಯ ವಿಧಾನಸಭೆ ಚುನಾವನೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷದ ಗೆದ್ದು ಅಧಿಕಾರಕ್ಕೆ ಬಂದಲ್ಲಿ ಮೈಸೂರಿಮಲ್ಲಿ ಫಿಲಂ ಸಿಟಿ ನಿರ್ಮಿಸುವುದಾಗಿ ಘೋಷಣೆ ಮಾಡಿತ್ತು.

CM Tweet

2023-24ನೇ ಸಾಲಿನ ಬಜೆಟ್ ಅಧಿವೇಶನ​ ಮುಗಿದ ನಂತರ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಚಿತ್ರನಗರಿ ನಿರ್ಮಾಣಕ್ಕಾಗಿ ಅಧಿಕಾರಿಗಳು ಹಾಗೂ ಕರ್ನಾಟಕ ಚಲನಚಿತ್ರರಂಗದವರ ಜೊತೆ ಸುದೀರ್ಘ ಚರ್ಚೆ ನಡೆಸುವುದಾಗಿ ಸಿಎಂ ರಾಜೇಂದ್ರ ಸಿಂಗ್​ ಬಾಬು ನೇತೃತ್ವದ ನಿಯೋಗಕ್ಕೆ ಆಶ್ವಾಸನೆ ನೀಡಿದ್ಧಾರೆ.

ಚಲನಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಟಿ ಎನ್.ಸೀತಾರಾಮ್, ಲಿಂಗದೇವರು, ನಂಜುಂಡೇಗೌಡ, ಹಿರಿಯ ನಟ ಶ್ರೀನಿವಾಸ ಮೂರ್ತಿ, ಕಲಾವಿದೆ ವಿಜಯಲಕ್ಷ್ಮಿ ಸಿಂಗ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಈ ವೇಳ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net