ಉಪ ಚುನಾವಣೆ: ಸಂಡೂರು 'ಕೈ' ಅಭ್ಯರ್ಥಿಯಾಗಿ ಸಂಸದ ಈ.ತುಕಾರಾಂ ಪತ್ನಿಗೆ ಟಿಕೆಟ್, ಸಿಎಂ ಹೇಳಿದ್ದಿಷ್ಟು | By Election

cm siddaramaiah
Published on

ಮೈಸೂರು: ಉಪ ಚುನಾವಣೆಯ (By Election) ಕಣ ರಂಗೇರಿದ್ದು, ದಿನದಿಂದ ದಿನಕ್ಕೆ ಕದನದ ಕಾವು ಹೆಚ್ಚಾಗುತ್ತಿದೆ. ಅತ್ತ ತಮ್ಮ ಎಲ್​ಎಂಸಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷೇತರ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್​ ಕಣಕ್ಕಿಳಿದರೆ, ಇತ್ತ ಸಿಪಿವೈ ಕಾಂಗ್ರೆಸ್​ ಜತೆ ಕೈಜೋಡಿಸಲಿದ್ದಾರೆ ಎಂಬ ಮಾತುಗಳು ವ್ಯಾಪಕವಾಗಿ ಸದ್ದು ಮಾಡುತ್ತಿವೆ. ಇನ್ನು ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾರು ಸ್ಪರ್ಧಿಸುತ್ತಾರೆ ಎಂಬ ಮಾಹಿತಿ ಇದೀಗ ಅಧಿಕೃತವಾಗಿ ಹೊರಬಿದ್ದಿದೆ.

ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿಗೆ ಟಿಕೆಟ್ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ. ಸುರೇಶ್ ಅವರೂ ಕೂಡ ಇಲ್ಲಿ ಪ್ರಬಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವುದು ಸ್ಪಷ್ಟವಾಗಲಿದೆ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net