

ಆರ್‌ಎಸ್‌ಎಸ್ ಬಗ್ಗೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮಾತನಾಡುತ್ತಾರೆ. ದೇಶದ ರಕ್ಷಣೆ, ದೇಶ ಸೇವೆ ಮಾಡುತ್ತಿರುವುದು ಆರ್‌ಎಸ್‌ಎಸ್. ಅವರು ಸಂಘ ಪರಿವಾರವನ್ನು ಟೀಕೆ ಮಾಡುತ್ತಾ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ ಎಂದು ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಸಂಗೊಳ್ಳಿ ರಾಯಣ್ಣ, ಚನ್ನಮ್ಮ ಬ್ರಿಗೇಡ್ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಅಂತಿಮವಾದ ತೀರ್ಮಾನವನ್ನು ಇನ್ನೂ ಮಾಡಿಲ್ಲ. ಈ ಸಂಬಂಧ ಶೀಘ್ರದಲ್ಲೇ ಬಾಗಲಕೋಟೆಯಲ್ಲಿ ಸಮಾವೇಶ ಮಾಡುತ್ತಿದ್ದೇವೆ. ಸಮಾವೇಶಕ್ಕೆ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಇತರೆ ಗಣ್ಯರು ಬರುತ್ತಾರೆ ಎಂದರು.