

ಲಖನೌ: ಕೋರ್ಟ್ ಆವರಣದಲ್ಲೇ ಗ್ಯಾಂಗ್ಸ್ಟರ್ನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ.
ಸಂಜೀವ್ ಜೀವಾ ಎಂಬಾತನೇ ಮೃತ ದುರ್ದೈವಿಯಾಗಿದ್ದು, ಬುಧವಾರ ಲಕ್ನೋ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಈತನ ಹತ್ಯೆಗೈಯ್ಯಲಾಗಿದೆ. ಕೆಲ ದಿನಗಳ ಹಿಂದೆ ಜೀವಾವಧಿ ಶಿಕ್ಷೆಗೊಳಗಾಗಿದ್ದ ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ಸಂಜೀವ್ ಆಪ್ತನಾಗಿದ್ದ ಎನ್ನಲಾಗಿದೆ.
ಬಿಜೆಪಿ ಮುಖಂಡ ಬ್ರಹ್ಮದತ್ ದ್ವಿವೇದಿ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ಜೀವಾನನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತಂದಾಗ ವೇಳೆ ವಕೀಲನ ವೇಷ ಧರಿಸಿದ್ದ ದಾಳಿಕೋರನೊಬ್ಬ ಗ್ಯಾಂಗ್ಸ್ಟರ್ನನ್ನು ಹತ್ಯೆಗೈದಿದ್ದಾನೆ. ಕೂಡಲೇ ಸ್ಥಳದಲ್ಲಿ ಕೆಲಕಾಲ ಆತಂಕದ ನಿರ್ಮಾಣವಾಗಿ ಜನರು ದಿಕ್ಕಾಪಾಲಾಗಿ ಓಡಾಡಿದ್ದಾರೆ.
ಘಟನೆಯಲ್ಲಿ ಓರ್ವ ಕಾನ್‌ಸ್ಟೆಬಲ್ ಮತ್ತು ಮಗುವಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು, ದಾಳಿಕೋರರನ್ನು ಪೊಲೀಸರ ಬಂಧಿಸಿದ್ದು, ಈತ ಆರು ಸುತ್ತು ಗುಂಡು ಹಾರಿಸಿದ್ದ ಎಂದು ಹೇಳಿದ್ದಾರೆ.(ಏಜೆನ್ಸೀಸ್)