

ಬೆಂಗಳೂರು: ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ.
ಆದರೆ ರಾಮನ ಹೆಸರು ಹೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ ಬಿಜೆಪಿಗೆ ಸನ್ಮತಿ ದೇ ಭಗವಾನ್ ಎಂದು ಹೇಳಬೇಕಾಗಿ ಬಂದಿರೋದು ದುರಂತ ಎಂದು ರಾಜ್ಯ ಕಾಂಗ್ರೆಸ್ ಕುಟುಕಿದೆ.
ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ, ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು ಎಂದು ಹೇಳಿಕೊಂಡಿದೆ.
ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್, ಆಗ ಬಿಜೆಪಿ ಹುಟ್ಟೇ ಇರಲಿಲ್ಲ. 1985-86ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ. 1989ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್‌ಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ ಎಂದು
ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ. ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿ ಕಾಲೆಳೆದಿದೆ.