ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ, ಈಶ್ವರಪ್ಪನಿವಾಸದಲ್ಲಿ ಸಂತಸ

20 smg 12
Published on

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ ಪಾತ್ರ ಸಾಭೀತಾಗದ ಹಿನ್ನೆಲೆಯಲ್ಲಿ ಬಿ ರಿಪೋರ್ಟ್ ಹಾಕಲಾಗಿದೆ ಎಂಬ ಸುದ್ದಿ ಬರುತ್ತಿದ್ದಂತೆಯೇ ಬುಧವಾರ ಶಿವಮೊಗ್ಗ ಗುಂಡಪ್ಪ ಶೆಡ್‌ನಲ್ಲಿರುವ ಕೆ.ಎಸ್.ಈಶ್ವರಪ್ಪ ನಿವಾಸದಲ್ಲಿ ಸಂತಸ ಮನೆ ಮಾಡಿತ್ತು.

ಬಿಜೆಪಿ ಮುಖಂಡರು, ಹಿತೈಷಿಗಳು ಈಶ್ವರಪ್ಪ ನಿವಾಸಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು. ಕೆ.ಇ.ಕಾಂತೇಶ್ ತಂದೆಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು. ಈಶ್ವರಪ್ಪ ಪತ್ನಿ ಜಯಲಕ್ಷ್ಮೀ, ಸೊಸೆ ಶಾಲಿನಿ, ಸೂಡಾ ಅಧ್ಯಕ್ಷ ನಾಗರಾಜ್, ಬಿಜೆಪಿ ನಗರಾಧ್ಯಕ್ಷ ಜಗದೀಶ್, ನಗರ ಪಾಲಿಕೆ ಸದಸ್ಯ ಪ್ರಭಾಕರ್ ಮುಂತಾದವರು ಈ ಸಂದರ್ಭದಲ್ಲಿದ್ದರು.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಕೆ.ಎಸ್.ಈಶ್ವರಪ್ಪ, ನನ್ನ ವಿರುದ್ಧ ಆರೋಪ ಕೇಳಿ ಬಂದಾಗ ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದೆ. ತನಿಖಾಧಿಕಾರಿಗಳಿಗೆ ಎಲ್ಲ ರೀತಿಯಲ್ಲೂ ಸಹಕಾರ ನೀಡಿದ್ದೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂಬ ವಾಸ್ತವದ ಅರಿವು ನನಗಿತ್ತು. ನನ್ನ ಮನೆ ದೇವರು ಚೌಡೇಶ್ವರಿ ಆಶೀರ್ವಾದದಿಂದ ನಾನು ಇಂದು ಆರೋಪಮುಕ್ತನಾಗಿದ್ದೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net