

ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿರುವ ನಟಿ ಸಪ್ತಮಿ ಗೌಡ ಸ್ಟಾರ್ ಆಗಿ ಬಿಟ್ಟಿದ್ದಾರೆ. ಎರಡನೇ ಸಿನಿಮಾಗೆ ಸಪ್ತಮಿ ಗೌಡ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದರು. 'ಯುವ' ರಿಲೀಸ್ ಬಳಿಕ ಜಾಲಿ ಮೂಡಿಗೆ ಜಾರಿದ್ದಾರೆ. ಹೊಸ ಸಿನಿಮಾಗಳ ಬಗ್ಗೆ ಅಪ್‌ಡೇಟ್ ಕೊಡದೇ ಹೋದರೂ, ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ಸದ್ಯ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹೊಸ ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದಾರೆ.
ಕೂಲ್ ವಾತಾವರಣದಲ್ಲಿ ಅಷ್ಟೇ ಕೂಲ್ ಆಗಿ ಸಪ್ತಮಿ ಗೌಡ ಫೋಟೊಶೂಟ್ ಮಾಡಿಕೊಂಡಿದ್ದಾರೆ. ಬಿಳಿ ಟಾಪ್, ಕಡು ನೀಲಿ ಬಣ್ಣದ ಶಾರ್ಟ್ ತೊಟ್ಟು ಬೆಂಗಳೂರಿನ ರಸ್ತೆಯಲ್ಲಿ ನಿಂತು ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.
ಅಲ್ಲದೇ ಸದ್ಯ ಸಪ್ತಮಿ ಲುಕ್ಗೆ ಪಡ್ಡೆ ಹುಡುಗರು ಫಿದಾ ಆಗಿದ್ದಾರೆ. ಈ ಮಳೆಗಾಲದಲ್ಲಿ ಸಪ್ತಮಿ ಅವರನ್ನ ನೋಡೋದೇ ಒಂದು ಖುಷಿ ಅಂತ್ಹೇಳಿ ಕಾಮೆಂಟ್ ಮಾಡುತ್ತಿದ್ದಾರೆ.
ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದೀರಿ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು "ಸಂದರ್ಯದೇವತೆ ಇಲ್ಲವೋ ಕೋರಿಯನ್ ಹೀರೋಯಿನ್ ಹಾಗೆ ಕಾಣಿಸುತ್ತಿದ್ದೀರ" ಎಂದು ಮತ್ತೊಬ್ಬರು ಬರೆದುಕೊಂಡಿದ್ದಾರೆ. ಮತ್ತೊಬ್ಬರು "ಬ್ಯೂಟಿ ಕ್ವೀನ್'' ಎಂದು ಕಾಮೆಂಟ್ ಮಾಡಿದ್ದಾರೆ.
ತೆಲುಗು ಸಿನಿಮಾವನ್ನು ಒಪ್ಪಿಕೊಂಡಿರೋದು ಗೊತ್ತೇ ಇದೆ. ಟಾಲಿವುಡ್ ನಟ, ಜಯಂ ಖ್ಯಾತಿಯ ನಿತಿನ್‌ಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಶೂಟಿಂಗ್ ಸದ್ಯ ನಡೆಯುತ್ತಿದೆ.
ಸಪ್ತಮಿ ಗೌಡ ಆ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಗ್ಯಾಪ್ ಸಿಕ್ಕಾಗ ಹೊಸ ಹೊಸ ಫೋಟೊ ಶೂಟ್‌ಗಳನ್ನ ಮಾಡಿಸಿ, ತಮ್ಮ ಅಭಿಮಾನಿಗಳಿಗಾಗಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಾರೆ.
'ಯುವ' ರಿಲೀಸ್ ಬಳಿಕ ಜಾಲಿ ಮೂಡಿಗೆ ಜಾರಿದ್ದಾರೆ. ಹೊಸ ಸಿನಿಮಾಗಳ ಬಗ್ಗೆ ಅಪ್‌ಡೇಟ್ ಕೊಡದೇ ಹೋದರೂ, ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ.
ಸದ್ಯ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹೊಸ ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.