ಬಿಗಿ ಭದ್ರತೆಯೊಂದಿಗೆ ಅಮರನಾಥ ಯಾತ್ರೆಗೆ ತೆರಳಿದ ಸಾರಾ ಅಲಿ ಖಾನ್; ವಿಡಿಯೋ ಹಂಚಿಕೊಂಡ ಫ್ಯಾನ್ಸ್​

Untitled design - 2023-07-20T172655.279
Published on

ಜಮ್ಮು ಮತ್ತು ಕಾಶ್ಮೀರ: ಹೆಚ್ಚಿನ ಭದ್ರತಾ ಪಡೆಯೊಂದಿಗೆ ಬಾಲಿವುಡ್​ ಬೆಡಗಿ ಸಾರಾ ಅಲಿ ಖಾನ್ ಇದೀಗ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಅಮರನಾಥ ಯಾತ್ರೆಗೆ ತೆರಳಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.

ಇತ್ತೀಚೆಗಷ್ಟೇ ನಟಿ ಸಾರಾ ಅಲಿ ಖಾನ್ ನಟನೆಯ 'ಝರಾ ಹಟ್ಕೆ, ಝರಾ ಬಜ್ಕೆ' ಚಿತ್ರ ಬಿಡುಗಡೆಗೊಂಡು ಸಿನಿಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡ ಬೆನ್ನಲ್ಲೇ ಇದೀಗ ನಟಿ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಬಿಗಿ ಭದ್ರತಾ ಪಡೆಯೊಂದಿಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ನಟಿಯನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು, ತಮ್ಮ ಮೊಬೈಲ್​​ನಲ್ಲಿ ನಟಿ ಸಾರಾ ನಡೆದುಕೊಂಡು ಹೋಗುವ ದೃಶ್ಯವನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಕೆಲವರು ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಮುಂದಿನ ಚಿತ್ರಗಳಿಗೆ ಶುಭವಾಗಲಿ ಎಂದು ಹರಸಿದ್ದಾರೆ.

ನಟಿ ಸಾರಾ ಅಲಿ ಖಾನ್​ ಅಭಿನಯದ 'ಮೆಟ್ರೋ ಇನ್ ಡಿನೋ' ಚಿತ್ರ ಇದೀಗ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರವನ್ನು ಅನುರಾಗ್ ಬಸು ನಿರ್ದೇಶಿಸಿದ್ದಾರೆ. ಸಿನಿಮಾದಲ್ಲಿ ಆದಿತ್ಯ ರಾಯ್ ಕಪೂರ್, ಕೊಂಕಣಾ ಸೇನ್ ಶರ್ಮಾ, ಪಂಕಜ್ ತ್ರಿಪಾಠಿ, ಫಾತಿಮಾ ಸನಾ ಶೇಖ್, ಅನುಪಮ್ ಖೇರ್, ಅಲಿ ಫಜಲ್ ಮತ್ತು ನೀನಾ ಗುಪ್ತಾ ಸೇರಿದಂತೆ ಮುಂತಾದ ಕಲಾವಿದರು ನಟಿಸಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net