

ಅಹ್ಮದಾಬಾದ್: ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ(PM Modi) ಶುಕ್ರವಾರ(ಅ. 31) ಗುಜರಾತ್‌ನ ನರ್ಮದಾ ಜಿಲ್ಲೆಯರುವ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
2014ರಿಂದ ಸರ್ದಾರ್ ಪಟೇಲ್ ಅವರ ಜನ್ಮ ದಿನವನ್ನು ರಾಷ್ಟ್ರೀಯ ಏಕತಾ ದಿವಸ್ ಎಂದು ಆಚರಿಸಲಾಗುತ್ತಿದೆ. 182 ಮೀಟರ್ ಎತ್ತರದ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಪ್ರಧಾನಿ, ಬಳಿಕ ಸಮೀಪದ ಸ್ಥಳಕ್ಕೆ ತೆರಳಿ ಏಕ್ತಾ ದಿವಸ್ ಪ್ರತಿಜ್ಞೆ ಬೋಧಿಸಿ, ರಾಷ್ಟ್ರೀಯ ಏಕತಾ ದಿನದ ಮೆರವಣಿಗೆಯಲ್ಲಿ ಭಾಗವಹಿಸಿದರು.
ಈ ವರ್ಷವೂ ಸಾಂಸ್ಕೃತಿಕ ಉತ್ಸವ ನಡೆದಿದ್ದು ಬಿಎಸ್‌ಎಫ್, ಸಿಆರ್‌ಪಿಎಫ್ ಹಾಗೂ ವಿವಿಧ ರಾಜ್ಯ ಪೊಲೀಸ್ ಪಡೆಗಳ ತುಕಡಿಗಳನ್ನು ಪ್ರದರ್ಶಿಸುವ ಭವ್ಯ ಮೆರವಣಿಗೆಯನ್ನು ನಡೆಸಿವೆ. ಈ ವರ್ಷ, ಗಣರಾಜ್ಯೋತ್ಸವದ ಮೆರವಣಿಗೆಯ ಮಾದರಿಯಲ್ಲಿ ಮೆರವಣಿಗೆಯನ್ನು ಆಯೋಜಿಸಲಾಗಿದ್ದು ಕಾರ್ಯಕ್ರಮವು ಮತ್ತಷ್ಟು ವಿಶೇಷವಾಗಿದೆ ಎನ್ನಲಾಗಿದೆ. (ಏಜೆನ್ಸೀಸ್)