ಸರ್ಕಾರಿ ಕಾರ್ನರ್​: ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವೇ?

sarkari corner4
Published on

ಪ್ರಶ್ನೆ: ಕನ್ನಡ ಮಾಧ್ಯಮದಲ್ಲಿ ಎಸ್​ಎಸ್​ಎಲ್​ಸಿ ಪಾಸಾಗಿರುವ ನಾನು, ಬಳಿಕ 2 ವರ್ಷಗಳ ಐಟಿಐ ವಿದ್ಯಾರ್ಹತೆ ಹೊಂದಿದ್ದೇನೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್​ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ (ಸಿ ಆ್ಯಂಡ್​ ಆರ್​) ಪ್ರಕಟಿಸಿದ್ದು, ಗ್ರೂಪ್​ ಡಿ ಹುದ್ದೆಯಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಪದೋನ್ನತಿ ಹೊಂದಲು ಐದು ವರ್ಷ ನಿಗದಿ ಮಾಡಲಾಗಿದೆ. ನಾನು ನನ್ನ ಹುದ್ದೆಯಲ್ಲಿ 5 ವರ್ಷಕ್ಕಿಂತ ಹೆಚ್ಚು ಕೆಲಸ ಮಾಡಿದ್ದೇನೆ. ಈಗ ನಾನು ಪದೋನ್ನತಿ ಹೊಂದಲು ಕನ್ನಡ ಭಾಷಾ ಪರೀಕ್ಷೆ ತೇರ್ಗಡೆ ಹೊಂದುವುದು ಕಡ್ಡಾಯವೇ?

| ನಂದೀಶ ಶೇಖರಪ್ಪ ರಾಗಿ, ಹಾವೇರಿ

ಉತ್ತರ: ನೀವು 1974ರ ಕರ್ನಾಟಕ ಸರ್ಕಾರಿ ಸೇವಾ (ಕನ್ನಡ ಭಾಷೆ ಮತ್ತು ಸೇವಾ ಪರೀಕ್ಷೆಗಳು) ನಿಯಮಾವಳಿಯಂತೆ ಇಲಾಖಾ ಪರೀಕ್ಷೆಯಾದ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಿರುತ್ತದೆ. ಆದರೆ, ಎಸ್​ಎಸ್​ಎಲ್​ಸಿಯಲ್ಲಿ ಪ್ರಥಮ/ದ್ವಿತೀಯ ಭಾಷೆ ಅಥವಾ ಉನ್ನತ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯನ್ನು ಅಧ್ಯಯನ ಮಾಡಿದ್ದರೆ ವಿನಾಯಿತಿ ನೀಡಲಾಗುತ್ತದೆ. ಹೆಚ್ಚಿನ ವಿವರಗಳಿಗೆ ಇದೇ ಲೇಖಕರ "ಕರ್ನಾಟಕ ಸರ್ಕಾರಿ ಸೇವಾ ಕಾನೂನು ಕೈಪಿಡಿ' ಪುಸ್ತಕ ನೋಡಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net