ಪೈಶಾಚಿಕ ಕೃತ್ಯ ಮನುಕುಲಕ್ಕೆ ಸವಾಲು

tth (14)
ತೀರ್ಥಹಳ್ಳಿ ತಾಲೂಕು ಸಂಯುಕ್ತ ಮುಸ್ಲಿಂ ಒಕ್ಕೂಟ, ಜಾಮಿಯಾ ಮಸೀದಿ ಪದಾಧಿಕಾರಿಗಳು ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ನೇತೃತ್ವದಲ್ಲಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.
Published on

ತೀರ್ಥಹಳ್ಳಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ನಡೆದಿರುವ ಭಯೋತ್ಪಾದಕ ದಾಳಿಯನ್ನು ತೀರ್ಥಹಳ್ಳಿ ತಾಲೂಕು ಸಂಯುಕ್ತ ಮುಸ್ಲಿಂ ಒಕ್ಕೂಟ ಮತ್ತು ಜಾಮಿಯಾ ಮಸೀದಿ ಆಡಳಿತ ಖಂಡಿಸಿ ತಾಲೂಕು ಕಚೇರಿಗೆ ಮನವಿ ಸಲ್ಲಿಸಿತು.

ಮನುಕುಲದ ವಿರೋಧಿಗಳು ಅಥವಾ ಸಂಘಟನೆ ನಡೆಸಿದ ಈ ಪೈಶಾಚಿಕ ಕೃತ್ಯ ಇಡೀ ಮನುಕುಲಕ್ಕೆ ಸವಾಲೊಡ್ಡುವಂತಿದೆ. ಭೂ ಸ್ವರ್ಗವೆಂದು ಖ್ಯಾತಿ ಪಡೆದಿರುವ ಕಣಿವೆ ರಾಜ್ಯದಲ್ಲಿ ಒಂದು ಧರ್ಮೀಯರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲಾಗಿದೆ. ಎಲ್ಲ ಸಮುದಾಯದವರೂ ಇದನ್ನು ಖಂಡಿಸಬೇಕು ಎಂದು ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ನೇತೃತ್ವದಲ್ಲಿ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ಚಟುವಟಿಕೆಯನ್ನು ಸಂಪೂರ್ಣ ಮಟ್ಟಹಾಕಲು ಜನತೆ ಒಂದಾಗುವ ಅಗತ್ಯವಿದೆ. ಈ ಕೃತ್ಯಕ್ಕೆ ಯಾರೇ ಕಾರಣರಾಗಿದ್ದರೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net