

India: ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ್ದು. ಈ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿರುವ ಭಾರತ, ಈ ಒಪ್ಪಂದವು ಎರಡೂ ದೇಶಗಳ ನಡುವಿನ ದೀರ್ಘಕಾಲೀನ ವ್ಯವಸ್ಥೆಯನ್ನು ಅನಾವರಣಗೊಳಿಸುತ್ತದೆ ಎಂದು ತಿಳಿಸಿದೆ.
ಈ ಬಗ್ಗೆ ಎಕ್ಸ್ನಲ್ಲಿ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿರುವ ವಿದೇಶಾಂಗ ಸಚಿವಾಲಯ, ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವೆ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕುವ ವರದಿಗಳನ್ನು ನಾವು ನೋಡಿದ್ದೇವೆ. ಉಭಯ ದೇಶಗಳ ನಡುವಿನ ಬಹುಕಾಲದಿಂದ ಒಪ್ಪಂದವನ್ನು ಬಹಿರಂಗಪಡಿಸಿವೆ. ಈ ಬೆಳವಣಿಗೆಯು ಪರಿಗಣನೆಯಲ್ಲಿದೆ ಎಂದು ಸರ್ಕಾರಕ್ಕೆ ತಿಳಿದಿತ್ತು ಎಂದು ಹೇಳಿದೆ.
ಈ ಬೆಳವಣಿಗೆಯು ನಮ್ಮ ರಾಷ್ಟ್ರೀಯ ಭದ್ರತೆ ಹಾಗೂ ಜಾಗತಿಕ ಸ್ಥಿರತೆಗೆ ಬೀರುವ ಪರಿಣಾಮಗಳನ್ನು ನಾವು ಅಧ್ಯಯನ ಮಾಡುತ್ತೇವೆ. ಭಾರತದ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಸಮಗ್ರ ರಾಷ್ಟ್ರೀಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವಿನ ಸುಮಾರು 8 ದಶಕಗಳಿಂದ ವಿಸ್ತರಿಸಿರುವ ಐತಿಹಾಸಿಕ ಸಂಬಂಧಗಳ ಮೇಲೆ ಪರಸ್ಪರ ರಕ್ಷಣಾ ಒಪ್ಪಂದವು ನಿರ್ಮಿಸಲ್ಪಟ್ಟಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಒಪ್ಪಂದವು ಸಹೋದರತ್ವ ಮತ್ತು ಇಸ್ಲಾಮಿಕ್ ಒಗ್ಗಟ್ಟಿನ ಬಂಧಗಳು, ಈ ಕಾರ್ಯತಂತ್ರದ ಆಸಕ್ತಿಗಳು ಮತ್ತು ಉಭಯ ದೇಶಗಳ ನಡುವಿನ ನಿಕಟ ರಕ್ಷಣಾ ಸಹಕಾರವನ್ನು ಆಧರಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. (ಏಜೆನ್ಸೀಸ್)