ಕಾಂಗ್ರೆಸ್ ತೊರೆದ ದೇಶದ ಶ್ರೀಮಂತ ಮಹಿಳೆ.. ಯಾವ ಪಕ್ಷ ಸೇರಿದರು?

jindal
Published on

ಚಂಡೀಗಢ: ದೇಶದ ಅತ್ಯಂತ ಶ್ರೀಮಂತ ಮಹಿಳೆ ಎಂದೇ ಖ್ಯಾತಿ ಪಡೆದಿರುವ ಸಾವಿತ್ರಿ ಜಿಂದಾಲ್ ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ.

ಅವರ ಪುತ್ರ ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಕುರುಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಬಿಜೆಪಿ ಅವರಿಗೆ ಟಿಕೆಟ್ ನೀಡಿದೆ.

ಆದರೆ ಸಾವಿತ್ರಿ ಹಲವು ವರ್ಷ ಕಾಂಗ್ರೆಸ್ ನಲ್ಲೇ ಇದ್ದರು. ಕುಟುಂಬ ಸದಸ್ಯರ ಸಲಹೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬುಧವಾರ ತಡರಾತ್ರಿ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಅವರು ಕಾಂಗ್ರೆಸ್ ತೊರೆದು ಗುರುವಾರ ಬಿಜೆಪಿ ಸೇರುವುದಾಗಿ ಘೋಷಿಸಿದರು.

ನನ್ನ ಕುಟುಂಬದ ಸದಸ್ಯರ ಸಲಹೆ ಮೇರೆಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಕೆಲ ದಿನಗಳ ಹಿಂದೆ ಸಾವಿತ್ರಿ ಪುತ್ರ ಮಾಜಿ ಸಂಸದ ನವೀನ್ ಜಿಂದಾಲ್ ಕೂಡ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಖ್ಯಾತ ಕೈಗಾರಿಕೋದ್ಯಮಿ ಮತ್ತು ಹರಿಯಾಣದ ಮಾಜಿ ಸಚಿವ ಓಪಿ ಜಿಂದಾಲ್ ಅವರ ಪುತ್ರ ನವೀನ್ ಈ ಬಾರಿ ಕುರುಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net