ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಆಫೀಸರ್ ಆಗಲು ಕರ್ನಾಟಕದ ಅಭ್ಯರ್ಥಿಗಳಿಗೆ ವಿಪುಲ ಅವಕಾಶ

SBI
Published on

ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 3850 ಹುದ್ದೆಗಳಿದ್ದು, ಕರ್ನಾಟಕದಲ್ಲಿ (ಬೆಂಗಳೂರು) 750 ಹುದ್ದೆಗಳಿವೆ.

ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿದ್ದು, ಅರ್ಹರಿಗೆ ಸೂಕ್ತ ಸಡಿಲಿಕೆ ಇದೆ.

ಜ್ಯೇಷ್ಠತಾ ಪಟ್ಟಿ ತಯಾರಿಸಿ, ಸಂದರ್ಶನ ಹಾಗೂ ಬ್ಯಾಂಕ್​​ನ ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆಯ ನಿಯಮಾವಳಿಗಳ ಅನುಸಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ ಜೆಎಂಜಿಸ್ಕೇಲ್1- 23700 ರೂ. ದಿಂದ 42020 ರೂ. ಇರುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು https://bank.sbi/careers ಅಥವಾ

https://www.sbi.co.in/careers ಮೂಲಕ ಆಗಸ್ಟ್ 16 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ https://bit.ly/3gqp27o ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net