ಎಸ್‌ಸಿ/ಎಸ್‌ಟಿ ಕುಂದು ಕೊರತೆ ಸಭೆ ನಾಳೆ

Published on

ಬೇಲೂರು: ತಾಲೂಕು ಪ.ಜಾತಿ/ಪ.ವರ್ಗದವರ ಕುಂದು ಕೊರತೆ ಹಾಗೂ ಹಿತರಕ್ಷಣೆಗೆ ಸಂಭಂದಿಸಿದಂತೆ ತಾಲೂಕು ಮಟ್ಟದ ಹಿತರಕ್ಷಣಾ ಸಮಿತಿ ಸಭೆಯನ್ನು ಪಟ್ಟಣದ ಹಳೇಬೀಡು ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅ. 7ರಂದು ಮಧ್ಯಾಹ್ನ 3 ಗಂಟೆಗೆ ತಹಸೀಲ್ದಾರ್ ಎಂ.ಮಮತಾ, ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ.

ಸಭೆಯಲ್ಲಿ ಶಾಸಕ ಎಚ್.ಕೆ.ಸುರೇಶ್ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದು ಮಾಹಿತಿ ನೀಡಲಿದ್ದಾರೆ. ಸಮುದಾಯದ ಜನಪ್ರತಿನಿಧಿಗಳು ಹಾಗೂ ಮುಖಂಡರು ಸಭೆಗೆ ಹಾಜರಾಗಿ ಸಲಹೆ, ಸೂಚನೆಗಳನ್ನು ನೀಡುವ ಮೂಲಕ ಸಭೆಯನ್ನು ಯಶಸ್ವಿ ಗೊಳಿಸಬೇಕೆಂದು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸದಸ್ಯ ಕಾರ್ಯದರ್ಶಿಯೂ ಆದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net