ಸರ್ಕಾರಿ ಇಲಾಖೆಗಳಲ್ಲಿನ ಗುತ್ತಿಗೆ ಉದ್ಯೋಗಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿಗೆ ಮೀಸಲಾತಿ; ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

Supreme Court 3 Jan 20
Published on

ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಆಡಳಿತ ಪಕ್ಷ ಬಿಜೆಪಿ ದೊಡ್ಡ ನಿರ್ಧಾರ ಕೈಗೊಂಡಿದೆ. ಈಗ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ವರ್ಗ (OBC)ಗಳಿಗೆ ಸರ್ಕಾರಿ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿನ ಗುತ್ತಿಗೆ ಉದ್ಯೋಗಗಳಿಗೂ ಮೀಸಲಾತಿ ನೀಡಲಾಗುತ್ತದೆ. ಜಾತಿ ಗಣತಿ ನಡೆಸಬೇಕೆಂಬ ಆಗ್ರಹದ ನಡುವೆಯೇ ಈ ನಿರ್ಧಾರಕ್ಕೆ ಬರಲಾಗಿದೆ.

ರಿಟ್ ಅರ್ಜಿಗೆ ಸ್ಪಂದಿಸಿದ ಕೇಂದ್ರ
ಮೀಸಲಾತಿಗೆ ಆಗ್ರಹಿಸಿ ಸಲ್ಲಿಸಿರುವ ರಿಟ್ ಅರ್ಜಿಗೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರ, ಸರ್ಕಾರಿ ಇಲಾಖೆಗಳಲ್ಲಿ 45 ದಿನ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಗುತ್ತಿಗೆ ಉದ್ಯೋಗಗಳಿಗೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗೆ ಮೀಸಲಾತಿ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ತಾತ್ಕಾಲಿಕ ಹುದ್ದೆಗಳಲ್ಲಿ ಮೀಸಲಾತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ತಿಳಿಸಿದೆ.

ಸಂಸದೀಯ ಸಮಿತಿ ವರದಿ ಉಲ್ಲೇಖ
'ಲೈವ್ ಲಾ' ಪ್ರಕಾರ, ಕೇಂದ್ರ ಸರ್ಕಾರದ ಹುದ್ದೆಗಳು ಮತ್ತು ಸೇವೆಗಳ ನೇಮಕಾತಿಗಳಿಗೆ ಸಂಬಂಧಿಸಿದಂತೆ, ತಾತ್ಕಾಲಿಕ ನೇಮಕಾತಿಗಳಲ್ಲಿ SC, ST ಮತ್ತು OBC ಅಭ್ಯರ್ಥಿಗಳಿಗೆ ಮೀಸಲಾತಿ ನೀಡಲಾಗುವುದು, ಇದು 45 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯವರೆಗೆ ಇರುತ್ತದೆ. OM ನಲ್ಲಿ SC ಮತ್ತು ST ಗಳ ಕಲ್ಯಾಣ ಸಂಸದೀಯ ಸಮಿತಿಯ ವರದಿಯನ್ನು ಉಲ್ಲೇಖಿಸಲಾಗಿದೆ. ಎಲ್ಲಾ ಇಲಾಖೆಗಳು ತಾತ್ಕಾಲಿಕ ಉದ್ಯೋಗಗಳಲ್ಲಿ ಮೀಸಲಾತಿಯ ಸೂಚನೆಗಳನ್ನು ಅನುಸರಿಸುತ್ತಿಲ್ಲ ಎಂದು ಕಂಡುಬಂದಿದೆ.

ಸೂಚನೆ ನೀಡಿದ ಕೇಂದ್ರ
45 ದಿನಗಳು ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಎಲ್ಲಾ ತಾತ್ಕಾಲಿಕ ನೇಮಕಾತಿಗಳಲ್ಲಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಒದಗಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರವು ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ವಿನಂತಿಸಿದೆ. ಈ ಸೂಚನೆಗಳನ್ನು ಅನುಸರಿಸಲು ಸಂಬಂಧಪಟ್ಟ ಎಲ್ಲರಿಗೂ ತಿಳಿಸಿದೆ.

ರಿಟ್ ಅರ್ಜಿ ವಿಲೇವಾರಿ ಮಾಡಿದ ಪೀಠ
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಕೇಂದ್ರದ ಪರ ಹಾಜರಾದ ವಕೀಲರ ಹೇಳಿಕೆಯನ್ನು ದಾಖಲಿಸಿಕೊಂಡಿತು. ನ.21, 2012 ರ ಕಚೇರಿ ಮೆಮೊರಾಂಡಮ್ ಅನ್ನು ಅನುಸರಿಸಲು ವಿಫಲವಾದ ಪ್ರಕರಣಗಳನ್ನು ಎದುರಿಸಲು ವ್ಯವಸ್ಥೆಯು ಜಾರಿಯಲ್ಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

1968ರಿಂದ ಜಾರಿಯಲ್ಲಿದೆ ಮೀಸಲಾತಿ ವ್ಯವಸ್ಥೆ
1968ರಿಂದಲೂ ತಾತ್ಕಾಲಿಕ ನೇಮಕಾತಿಯಲ್ಲಿ ಮೀಸಲಾತಿ ವ್ಯವಸ್ಥೆ ಜಾರಿಯಲ್ಲಿದೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ 2018 ಮತ್ತು 2022 ರಲ್ಲೂ ಸೂಚನೆಗಳನ್ನು ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net