ಪರಿಶಿಷ್ಟರಿಗೆ ಮೂಲ ಸೌಕರ್ಯ ದೊರಕಲಿ

ambedkar
ಬಾಳೆಹೊನ್ನೂರು ಸಮೀಪದ ಮಹಲ್ಗೋಡು ಗ್ರಾಮದಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್ ಪರಿನಿರ್ವಾಣ ದಿನವನ್ನು ಸಮನ್ವಯ ಸಮಿತಿ ಅಧ್ಯಕ್ಷ ಎ.ಸಿ.ಶ್ರೀನಿವಾಸ್ ಉದ್ಘಾಟಿಸಿದರು. ರಾಜೇಶ್, ಈರಪ್ಪ, ಮಂಜುನಾಥ್, ಸುಬ್ರಹ್ಮಣ್ಯ, ಭವಾನಿ ಇದ್ದರು.
Published on

ಬಾಳೆಹೊನ್ನೂರು: ಎಸ್ಸಿ, ಎಸ್ಟಿ ಸಮುದಾಯದವರಿಗೆ ಸಿಗಬೇಕಾದ ಮೂಲ ಸೌಕರ್ಯ ಸಮರ್ಪಕವಾಗಿ ದೊರಕಬೇಕು ಎಂದು ಜಿಲ್ಲಾ ಎಸ್ಸಿ, ಎಸ್ಟಿ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಎ.ಸಿ.ಶ್ರೀನಿವಾಸ್ ತಿಳಿಸಿದರು.
ಸಮೀಪದ ಮಹಲ್ಗೋಡು ಗ್ರಾಮದಲ್ಲಿ ಚಿಕ್ಕಮಗಳೂರು ಜಿಲ್ಲಾ ಎಸ್ಸಿ, ಎಸ್ಟಿ ಸಮನ್ವಯ ಸಂಘ ಬುಧವಾರ ಆಯೋಜಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರಗಳು ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸಲು ವಿಲವಾಗಿವೆ. ಗ್ರಾಮ ಪಂಚಾಯಿತಿಗಳಲ್ಲಿ ಶೇ.20 ಅನುದಾನ ಸರಿಯಾಗಿ ಬಳಕೆಯಾಗಬೇಕು. ಶೋಷಿತ ಸಮುದಾಯದವರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಪ್ರತಿಯೊಬ್ಬರೂ ಸಂವಿಧಾನದ ಬಗ್ಗೆ ಅರಿವು ಮೂಡಿಸಿಕೊಂಡು ಮಾಹಿತಿ ತಿಳಿದುಕೊಳ್ಳುವ ಅವಶ್ಯವಿದೆ. ಪ್ರತಿ ಗ್ರಾಮದಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನವನ್ನು ಆಚರಿಸಬೇಕು ಎಂದರು.
ಸಮನ್ವಯ ಸಮಿತಿ ಜಿಲ್ಲಾ ಕಾರ್ಯದರ್ಶಿ ಎಸ್.ರಾಜೇಶ್, ಗೌರವಾಧ್ಯಕ್ಷ ಬಿ.ಡಿ.ಈರಪ್ಪ, ಎನ್.ಆರ್.ಪುರ ತಾಲೂಕು ಅಧ್ಯಕ್ಷ ಪಿ.ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಸುಬ್ರಹ್ಮಣ್ಯ, ಹೋಬಳಿ ಉಪಾಧ್ಯಕ್ಷ ಸತೀಶ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಎಂ.ವಿ.ಭವಾನಿ, ಉಪಾಧ್ಯಕ್ಷೆ ಸುಜಾತಾ, ಪ್ರಮುಖರಾದ ಮಂಜುನಾಥ್, ಜಯರಾಮ್, ಸುಂದರ, ನಾರಾಯಣ, ಸುರೇಶ್, ಗೋಪಾಲ, ಅವಿನಾಶ್, ಚಂದ್ರಿಕಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net