ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ; ಮಠಾಧೀಶರ ಸಂತಾಪ

New Project
Published on

ಬೆಂಗಳೂರು: ಹಿರಿಯ ವಿದ್ವಾಂಸ , ಪ್ರವಚನಕಾರ, ಸಾಹಿತಿ ಮತ್ತು ಪ್ರಕಾಶಕ ಸಗ್ರಿ ರಾಘವೇಂದ್ರ ಉಪಾಧ್ಯಾಯ ಅವರು ಬೆಂಗಳೂರಿನಲ್ಲಿ ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 71 ವರ್ಷ ವಯಸ್ಸಾಗಿದ್ದ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಉಡುಪಿ ಮೂಲದ ಉಪಾಧ್ಯಾಯರು ಶ್ರೀ ವಿದ್ಯಾಮಾನ್ಯ ತೀರ್ಥರು ಹಾಗೂ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಮತ್ತಿತರ ಪಂಡಿತರಲ್ಲಿ ಅಧ್ಯಯನ ಮಾಡಿ, ವೇದಾಂತ ಶಾಸ್ತ್ರದಲ್ಲಿ ಪಾರಂಗತರಾಗಿದ್ದರು. ಸಂಸ್ಕೃತದಲ್ಲಿ ಎಂಎ ಪಡೆದು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.

ಉಡುಪಿಯ ಹಲವಾರು ಮಠಗಳಿಗೆ ಆಸ್ಥಾನ ವಿದ್ವಾಂಸರಾಗಿದ್ದ ರಾಘವೇಂದ್ರ ಉಪಾಧ್ಯಾಯ ಅವರು ಪರವಿದ್ಯಾ ಪ್ರಕಾಶನ ಸಂಸ್ಥೆ ಆರಂಭಿಸಿ ನೂರಾರು ಗ್ರಂಥಗಳನ್ನು ಪ್ರಕಟಿಸಿದ್ದರು.

ಉಡುಪಿ ಮಠಾಧೀಶರ ಸಂತಾಪ:

ವಿದ್ವಾಂಸ ಸಗ್ರಿ ಅವರ ನಿಧನಕ್ಕೆ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ , ಫಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಮತ್ತು ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿಯವರು ಸಂತಾಪ ವ್ಯಕ್ತಪಡಿಸಿದ್ದು, ಮೃತರಿಗೆ ಸದ್ಗತಿ ದೊರಕಲಿ ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net