ವಿವೇಕಾನಂದರ ಆದರ್ಶ ಅನುಸರಿಸಿ

29BTP01
Published on
  • ಬೆಟ್ಟದಪುರ: ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮೈಸೂರು ಜಿಲ್ಲಾ ವ್ಯವಸ್ಥಾಪಕ ಶಿವಕುಮಾರ್ ಸಲಹೆ ನೀಡಿದರು. ಬೆಟ್ಟದಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ 2023-24ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ರೆಡ್‌ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯು ಕಾಲೇಜಿನಿಂದ ಮನೆಗೆ ಹೋದ ಬಳಿಕ ತಾವು ಕಲಿತ ಪಾಠಗಳ ಬಗ್ಗೆ ಮೆಲುಕು ಹಾಕಬೇಕು. ನಿಮ್ಮ ಬಗ್ಗೆ ನೀವೇ ಪರಿಶೋಧನೆ ಮಾಡಿಕೊಳ್ಳಬೇಕು. ಹಂತ ಹಂತವಾಗಿ ಕಲಿತು, ನಿಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ. ಜೀವನದಲ್ಲಿ ಒಂದೇ ಬಾರಿಗೆ ವಿದ್ಯಾರ್ಥಿ ಜೀವನ ಸಿಗುವುದರಿಂದ ಇಂತಹ ಸಂದರ್ಭದಲ್ಲಿ ಏಕಾಗ್ರತೆಯಿಂದ ಓದುವ ಮೂಲಕ ನಿರ್ದಿಷ್ಟ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net