

ಬೆಂಗಳೂರು: ರಾಜ್ಯದ ಎಲ್ಲ ಪಿಯು ಕಾಲೇಜುಗಳಿಗೆ ಫೆ.15ರವರೆಗೆ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಹಿಜಾಬ್ ಗಲಾಟೆ ಹೆಚ್ಚುತ್ತಿರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪಿಯು ಕಾಲೇಜುಗಳಿಗೆ ಈ ಆದೇಶ ಅನ್ವಯವಾಗಲಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿ ಶೇಖರ್ ಆದೇಶ ಹೊರಡಿಸಿದ್ದಾರೆ.
14ಕ್ಕೆ ಶಾಲೆ ಆರಂಭ: 9 ಮತ್ತು 10ನೇ ತರಗತಿ ವಿದ್ಯಾಥಿರ್ಗಳಿಗೆ ಫೆ.14ರಂದು ತರಗತಿಗಳು ಆರಂಭವಾಗಲಿದೆ. ಈ ಹಿಂದೆ ಫೆ.11ರವರೆಗೆ ರಜೆ ಘೋಷಣೆ ಮಾಡಲಾಗಿತ್ತು.