

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಉಂಟಾಗಿರುವ ಸಂಘರ್ಷ ತೀವ್ರಗೊಂಡಿರುವುದರಿಂದ ವಿವಿಧ ಕನ್ನಡಪರ ಸಂಘಟನೆಗಳು ಸೆ. 29ರ ಶುಕ್ರವಾರ ಕರ್ನಾಟಕ ಬಂದ್ ನಡೆಸುವಂತೆ ಕರೆ ನೀಡಿವೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರ ನಗರ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ. ಹಾಗೆಯೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ತಿಳಿಸಿದ್ದಾರೆ.
ನಾಳೆ ವಾಹನಗಳ ಓಡಾಟದಲ್ಲಿ ಭಾರಿ ವ್ಯತ್ಯಯ ಆಗಲಿರುವುದರಿಂದ ಮಕ್ಕಳ ಆಗಬಹುದಾದ ಅನನುಕೂಲ ಮತ್ತು ಅವರ ಸುರಕ್ಷತೆ ದೃಷ್ಟಿಯಿಂದ ಎಲ್ಲ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.