ಹಾಡಹಗಲೇ ಶಾಲಾ ಪ್ರಾಂಶುಪಾಲನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು; CCTV Footage Viral

ShootOut
Published on

ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ ಶಾಲಾ ಪ್ರಾಂಶುಪಾಲರೊಬ್ಬರನ್ನು (School Principal) ಜನನಿಬಿಡ ರಸ್ತೆಯಲ್ಲೇ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಮೊರಾದಾಬಾದ್​ನಲ್ಲಿ (Moradabad) ನಡೆದಿದೆ. ಮೃತರನ್ನು ಶಬಾಬ್-ಉಲ್-ಹಸನ್ ಎಂದು ಗುರುತಿಸಲಾಗಿದ್ದು, ಹತ್ಯೆಯ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ (CCTV Footage) ಸೆರೆಯಾಗಿದೆ. 

ಘಟನೆಯ ಕುರಿತು ಮಾತನಾಡಿರುವ ಮೊರಾದಾಬಾದ್​ (Moradabad) ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಣವಿಜಯ್​ ಸಿಂಗ್ (Sp Ranvijay Singh)​, ಮೃತರನ್ನು ಶಬಾಬ್-ಉಲ್-ಹಸನ್ ಎಂದು ಗುರುತಿಸಲಾಗಿದ್ದು, ಇವರು ಮಜೋಲಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಲಕ್ಡಿ ಪ್ರದೇಶದಲ್ಲಿದ್ದ ಸಾಯಿ ವಿದ್ಯಾ ಮಂದಿರದ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದರು. ಶಾಲೆಗೆ 50 ಮೀಟರ್​ ದೂರ ಇರುವಾಗ ಈ ಘಟನೆ ನಡೆದಿದ್ದು, ಆರೋಪಿಗಳು ತಲೆಮಾರಿಸಿಕೊಂಡಿದ್ದಾರೆ.

ನಾಲ್ಕು ತಿಂಗಳ ಹಿಂದೆ ಶಾಲೆಯ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ (Suicide) ಮಾಡಿಕೊಂಡಿದ್ದರು. ತಮ್ಮ ಮಗುವಿನ ಸಾವಿಗೆ ಶಬಾಬ್​ ನೀಡಿದ ಹಿಂಸೆಯೇ ಕಾರಣ ಎಂದು ಮೃತರ ಪೋಷಕರು ಆರೋಪಿಸಿ ದೂರು ದಾಖಲಿಸಿದ್ದರು. ಈ ಸಂಬಂಧ Fir ಕೂಡ ದಾಖಲಾಗಿತ್ತು. ಈ ಕಾರಣಕ್ಕಾಗಿ ಹತ್ಯೆ ನಡೆದಿರಬಹುದೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಆರೋಪಿಗಳನ್ನು ಪತ್ತೆ ಹಚ್ಚಲು ಐದು ವಿಶೇಷ ತಂಡವನ್ನು ರಚಿಸಲಾಗಿದ್ದು, ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಮೊರಾದಾಬಾದ್​ (Moradabad) ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಣವಿಜಯ್​ ಸಿಂಗ್ (Sp Ranvijay Singh)​ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net