

ಕೋಲಾರ: ಮುಳಬಾಗಿಲು ತಾಲೂಕಿನ ಸೀಗೇನಹಳ್ಳಿ ಗೇಟ್ ಬಳಿ ಸೋಮವಾರ ಬೆಳಗ್ಗೆ ಶಾಲಾ ವಾಹನ ಪಲ್ಟಿಯಾಗಿದ್ದು, 15ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.
ನಂಗಲಿಯಿಂದ ಮುಳಬಾಗಿಲು ಪಟ್ಟಣದ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಗೆ ಮಕ್ಕಳನ್ನು ಕರೆತರುತಿದ್ದ ವಾಹನ ಮಾರ್ಗಮಧ್ಯೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಮಕ್ಕಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿರಿ ಸಾರಿಗೆ ಬಸ್-ಕಾರಿನ ನಡುವೆ ಭೀಕರ ಅಫಾಘಾತ, ಸ್ಥಳದಲ್ಲೇ ನಾಲ್ವರ ದುರ್ಮರಣ