

ಬೆಂಗಳೂರು: ರಾಜ್ಯದಲ್ಲಿರುವ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಸೆ.21ರಿಂದ ತೆರೆಯುವುದಿಲ್ಲ.
ಕೇಂದ್ರ ಸರ್ಕಾರ ಸೆ.21ರಿಂದ 9ರಿಂದ 12ನೇ ತರಗತಿಯವರೆಗೆ ಶಾಲೆ ತೆರೆದು ಮಾರ್ಗದರ್ಶನ ನೀಡಲು ಅವಕಾಶ ಕಲ್ಪಿಸಿಕೊಡುವಂತೆ ಸೂಚಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಕರೊನಾ ಪ್ರಕರಣ ಹೆಚ್ಚಾಗುತ್ತಿರುವುದರಿಂದ ಶಾಲೆ ತೆರೆಯಲು ಅವಕಾಶ ನೀಡದಿರಲು ಸಾಧ್ಯವಿಲ್ಲವೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಪರಿಸ್ಥಿಯ ಅವಲೋಕನೆಯ ನಂತರ ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳುವುದಾಗಿ ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಕಂಟೇನ್ಮೆಂಟ್ ವಲಯ ಹೊರತುಪಡಿಸಿ 9ರಿಂದ 12ನೇ ತರಗತಿಗಳನ್ನು ತೆರೆದು ವಿದ್ಯಾರ್ಥಿಗಳ ಸಂದೇಶ ಪರಿಹಾರಕ್ಕಾಗಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡುವಂತೆ ಸೂಚಿಸಿತ್ತು.
ಈ ವಿಚಾರವನ್ನು ವಿವವರಾಗಿ ಪರಿಶೀಲಿಸಿದ ನಂತರ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಕರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ಪರಿಸ್ಥತಿಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬರುವುದು ಕ್ಷೇಮಕರವಲ್ಲ ಎಂದು ಅಭಿಪ್ರಾಯ ಪಡಲಾಗಿದೆ. ಇದರಿಂದಾಗಿ ಸೆಪ್ಟಂಬರ್ ಅಂತ್ಯದವರೆಗೆ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳನ್ನು ಶಾಲೆ, ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿ ನೀಡದರಿಲು ತೀರ್ಮಾನಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಂಶಕರ್ ತಿಳಿಸಿದ್ದಾರೆ.