

ಬೆಂಗಳೂರು: ರಾಜ್ಯದಲ್ಲಿ ಶಾಲಾ - ಕಾಲೇಜುಗಳ ಆರಂಭದ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಈಗಾಗಲೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸೆಪ್ಟಂಬರ್ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂದು ಹೇಳಲಾಗಿತ್ತಾರೂ, ಸರ್ಕಾರದ ಮಟ್ಟದಲ್ಲಿ ಅಂಥ ಚರ್ಚೆಗಳು ನಡೆದಿಲ್ಲ. ಕರೊನಾ ಸಂಕಷ್ಟ ಸಹಜ ಸ್ಥಿತಿಗೆ ಬಂದ ಬಳಿಕ ಈ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ ಎಂದೂ ಸುರೇಶ್ಕುಮಾರ್ ಹೇಳಿದ್ದಾರೆ.
ಈ ನಡುವೆ, ಸೆಪ್ಟಂಬರ್ 5ರಿಂದ ಶಾಲಾ- ಕಾಲೇಜುಗಳನ್ನು ಆರಂಭಿಸುವುದಾಗಿ ಆಂಧ್ರ ಪ್ರದೇಶ ಸರ್ಕಾರ ಘೋಷಿಸಿದೆ. ಈ ಬಗ್ಗೆ ಶಿಕ್ಷಣ ಸಚಿವರೇ ಮಾಹಿತಿ ನೀಡಿದ್ದಾರೆ.
ಆಗಸ್ಟ್ ಅಂತ್ಯಕ್ಕೆ ಶಿಕ್ಷಣ ಸಂಸ್ಥೆಗಳ ಆರಂಭಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಈ ಹಿಂದೆಯೇ ಸಚಿವ ಆದಿಮುಲಪು ಸುರೇಶ್ ಹೇಳಿದ್ದರು. ಈಗ ಸೆ.5 ದಿನಾಂಕ ಪ್ರಕಟಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ ಒಟ್ಟು 53,724 ಕೋವಿಡ್ ಪ್ರಕರಣಗಳಿದ್ದು, ಇದರಲ್ಲಿ 28,800 ಸಕ್ರಿಯ ಪ್ರಕರಣಗಳಾಗಿವೆ. 24,228 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, 696 ಜನರು ಮೃತಪಟ್ಟಿದ್ದಾರೆ.