ಪದ್ಮವಿಭೂಷಣ ಪ್ರೊ. ರೊದ್ದಂ ನರಸಿಂಹ ಇನ್ನಿಲ್ಲ

Roddam
Published on

ಬೆಂಗಳೂರು: ಖ್ಯಾತ ವೈಮಾನಿಕ ವಿಜ್ಞಾನಿ ಪದ್ಮವಿಭೂಷಣ ಪ್ರೊ. ರೊದ್ದಂ ನರಸಿಂಹ (88) ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ನಿಧನರಾದರು. ಅನಾರೋಗ್ಯದ ಕಾರಣಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ರಾತ್ರಿ 9.30ರ ವೇಳೆಗೆ ಕೊನೆಯುಸಿರೆಳೆದರು. ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

1933ರ ಜುಲೈ 20ರಂದು ಅವರು ಬೆಂಗಳೂರಿನಲ್ಲಿ ಜನಿಸಿದ್ದರು. ಐಐಎಸ್​ಸಿನಲ್ಲಿ ಅವರು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ನ್ಯಾಷನಲ್ ಸ್ಪೇಸ್ ಲ್ಯಾಬೋಲೇಟರಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಬೆಂಗಳೂರಿನ ಜವಾಹರಲಾಲ್ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರದ ಅಧ್ಯಕ್ಷ ರಾಗಿದ್ದರು. 2013ರಲ್ಲಿ ಅವರಿಗೆ ಪದ್ಮವಿಭೂಷಣ ಪುರಸ್ಕಾರ ನೀಡಿ ಸರ್ಕಾರ ಗೌರವಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net