

ತರೀಕೆರೆ: ಸ್ಕೌಟ್ಸ್ ಆ್ಯಂಡ್ ಗೈಡ್ಸ್ ದೇಶಾಭಿಮಾನ, ರಾಷ್ಟ್ರ ರಕ್ಷಣೆ ಜತೆಗೆ ಶಿಸ್ತುಬದ್ಧ ಜೀವನದ ಪಾಠ ಕಲಿಸಿಕೊಡಲಿದೆ ಎಂದು ಪುರಸಭೆ ಸದಸ್ಯ ಟಿ.ಜಿ.ಶಶಾಂಕ್ ಹೇಳಿದರು.
ಗುರುಭವನದಲ್ಲಿ ಸೋಮವಾರ ಆಯೋಜಿಸಿದ್ದ ತಾಲೂಕು ಮಟ್ಟದ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಮಾವೇಶದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆ ಜತೆಗೆ ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನಲ್ಲಿ ಪಾಲ್ಗೊಳ್ಳುವುದರಿಂದ ಮುಂದಿನ ವ್ಯಾಸಂಗ ಹಾಗೂ ಉದ್ಯೋಗದಲ್ಲಿ ಮೀಸಲಾತಿ, ಹೆಚ್ಚಿನ ಪ್ರಾತಿನಿಧ್ಯ ದೊರೆಯಲಿದೆ. ಮಕ್ಕಳ ಸೃಜನಾತ್ಮಕ ಕೌಶಲಗಳ ಬೆಳವಣಿಗೆ, ನಾಯಕತ್ವ ಗುಣ, ಭವಿಷ್ಯ ರೂಢಿಸಿಕೊಳ್ಳುವ ಸಲುವಾಗಿಯೂ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಪೂರಕವಾಗಲಿದೆ ಎಂದು ಹೇಳಿದರು.
ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವಾರ್ಷಿಕ ಕ್ರಿಯಾಯೋಜನೆ ಪುಸ್ತಕ ಬಿಡುಗಡೆಗೊಳಿಸಲಾಯಿತು. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಜಿಲ್ಲಾ ಸಂಚಾಲಕ ಕಿರಣ್‌ಕುಮಾರ್, ತಾಲೂಕು ಯುವ ಜನ ಸೇವಾ ಮತ್ತು ಕ್ರೀಡಾಧಿಕಾರಿ ಉಮೇಶ್, ತಾಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಆರ್.ವಿರೂಪಾಕ್ಷ, ಅಜ್ಜಂಪುರ ತಾಲೂಕು ದೈಹಿಕ ಶಿಕ್ಷಣ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಪರಮೇಶ್ವರಪ್ಪ, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ತಾಲೂಕು ಕಾರ್ಯದರ್ಶಿ ಕೆ.ಸಿ.ಬಸವರಾಜ್, ಶಿಕ್ಷಕ ಬಿ.ಎಸ್.ವಸಂತ್‌ಕುಮಾರ್ ಇತರರಿದ್ದರು.