ವರದಕ್ಷಿಣೆ ತರಲು ಪತ್ನಿಯನ್ನು ತವರಿಗೆ ಕಳಿಸಿ ಪ್ರಾಣ ಬಿಟ್ಟ ಮೂರ್ತಿ ತಯಾರಕ…

crime
Published on

ಆನೇಕಲ್: ಕೌಟುಂಬಿಕ ಕಲಹ ಹಿನ್ನೆಲೆ, ವ್ಯಕ್ತಿ ನೇಣಿಗೆ ಶರಣಾಗಿದ್ದು ಮೃತ ವ್ಯಕ್ತಿ ಗಣೇಶನ ಮೂರ್ತಿ ತಯಾರಿಕೆ ಮಾಡಿ ಜೀವನ ಸಾಗಿಸುತ್ತಿದ್ದರು. ಈ ಘಟನೆ ಬೆಂಗಳೂರು ಹೊರವಲಯ ಬನ್ನೇರುಘಟ್ಟ ಸಮೀಪದ ಶ್ಯಾನಭೋಗನಹಳ್ಳಿಯಲ್ಲಿ ಮೃತನಡೆದಿದ್ದು ಮೃತ ವ್ಯಕ್ತಿಯನ್ನು ರಾಜೇಶ್(35) ಎಂದು ಗುರುತಿಸಲಾಗಿದೆ.

ವೃತ್ತಿಯಲ್ಲಿ ಗಣೇಶ ಮೂರ್ತಿ ತಯಾರಿಕೆ ಮಾಡುತ್ತಿದ್ದ ಮೃತ ರಾಜೇಶ್, ಕಳೆದ ಹತ್ತು ವರ್ಷಗಳ ಹಿಂದೆ ನಗರದ ಪುಟ್ಟೇನಹಳ್ಳಿ ವಾಸಿ ಲಾವಣ್ಯ ಜೊತೆ ವಿವಾಹ ಆಗಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಇತ್ತೀಚೆಗೆ ಮದ್ಯವ್ಯಸನಿಯಾಗಿದ್ದ ರಾಜೇಶ್, ಪದೇ ಪದೇ ವರದಕ್ಷಿಣೆ ತರುವಂತೆ ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದ ಎನ್ನಲಾಗಿದೆ.

ರಾಜೇಶ್, ಒಂದು ವಾರದ ಹಿಂದೆಯಷ್ಟೇ ಪತ್ನಿಗೆ ಹಲ್ಲೆ ಮಾಡಿ ತವರಿಗೆ ಕಳುಹಿಸಿದ್ದ. ನಿನ್ನೆ ರಾತ್ರಿ ರಾಜೇಶ್​, ವೇಲ್​ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net