ಎಸ್‌ಡಿಎ ಲೋಕಾಯುಕ್ತ ಬಲೆಗೆ

chandrashekar
ಎಸ್‌ಡಿಎ ಚಂದ್ರಶೇಖರ್
Published on

ಬೀರೂರು: ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಕ್ಷೇತ್ರ ಸಂಪನ್ಮೂಲ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಸ್‌ಡಿಎ ಚಂದ್ರಶೇಖರ್ ಸೋಮವಾರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಲಿಂಗದಹಳ್ಳಿಯ ಶಿಕ್ಷಕ ಪರಮೇಶ್ವರ ನಾಯ್ಕ ನಿವೃತ್ತರಾಗಿದ್ದು, ಸರ್ಕಾರದಿಂದ ಸಿಗುವ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಎಸ್‌ಡಿಎ ಚಂದ್ರಶೇಖರ್ ಅವರು ಪಿಂಚಣಿ ಮತ್ತಿತರ ಸೌಲಭ್ಯ ಕಲ್ಪಿಸಿಕೊಡಲು 35 ಸಾವಿರ ರೂ. ಲಂಚ ಕೇಳಿದ್ದರು. ಹಾಗಾಗಿ ಪರಮೇಶ್ವರ ನಾಯ್ಕ ಅವರು ಲೋಕಾಯುಕ್ತ ಪೊಲೀಸರ ಮೊರೆಹೋಗಿದ್ದರು. ಸೋಮವಾರ ಬೆಳಗ್ಗೆ ಅರ್ಜಿದಾರರಿಂದ ಲಂಚದ ಹಣ ಸ್ವೀಕರಿಸುವಾಗ ಡಿವೈಎಸ್ಪಿ ತಿರುಮಲೇಶ್ ಮತ್ತು ತಂಡ ದಾಳಿ ನಡೆಸಿ ಚಂದ್ರಶೇಖರ್ ಅವರನ್ನು ಬಂಧಿಸಿದೆ
ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಅನಿಲ್ ರಾಥೋಡ್, ಮಲ್ಲಿಕಾರ್ಜುನ್, ಸಿಬ್ಬಂದಿ ವಿಜಯಭಾಸ್ಕರ್, ಲೋಕೇಶ್, ಅನಿಲ್, ಪ್ರಸಾದ್, ಪ್ರಕಾಶ್, ಚಂದನ್ ಕಾರ್ಯಾಚರಣೆಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net