

ಬೆಂಗಳೂರು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಎರಡನೇ ಪರೀಕ್ಷೆ ಆರಂಭವಾಗಿದ್ದು, ಮೊದಲನೇ ದಿನ ಸುಸೂತರವಾಗಿ ನಡೆದಿದೆ.
ಸೋಮವಾರ ಕನ್ನಡ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆ ನಡೆದಿದೆ. ಒಟ್ಟು 30,399 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 25,790 (ಶೇ.84.84) ವಿದ್ಯಾರ್ಥಿಗಳು ಹಾಜರಾಗಿದ್ದು, 4,609 ಮಂದಿ ಗೈರು ಹಾಜರಾಗಿದ್ದಾರೆ. ರಾಜ್ಯದ ಯಾವುದೇ ಭಾಗದಲ್ಲಿ ಪರೀಕ್ಷಾ ಅಕ್ರಮ ನಡೆದಿರುವ ಬಗ್ಗೆ ಎಲ್ಲಿಯೂ ವರದಿಯಾಗಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ. ಮಂಗಳವಾರ ಇತಿಹಾಸ ಮತ್ತು ಭೌತಶಾಸ ಪರೀಕ್ಷೆಗಳು ನಡೆಯಲಿವೆ.