ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ; ಚೆಕ್‌ ಮಾಡುವ ವಿಧಾನ, ಲಿಂಕ್ ಇಲ್ಲಿದೆ

puc result
Published on

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಡೆಸಿದ್ದ 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶವನ್ನು ನಾಳೆ ಪ್ರಕಟಿಸಲಿದೆ.

ಜುಲೈ 16ರ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಅಧಿಕೃತ https://karresults.nic.in ವೆಬ್​​ ಸೈಟ್​ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷೆ ಐಎಎಸ್​ ಅಧಿಕಾರಿ ಎನ್​ ಮಂಜುಶ್ರೀ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ 3 ಅನ್ನು 2024ರ ಜೂನ್‌ 24ರಿಂದ ಜುಲೈ 5ರವರೆಗೆ ನಡೆಸಲಾಗಿತ್ತು. ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಒಟ್ಟು 75,995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ ಕಲಾ ವಿಭಾಗದಿಂದ 30, 811 ಹಾಗೂ ವಿಜ್ಞಾನ ವಿಭಾಗದಲ್ಲಿ 19,783, ವಾಣಿಜ್ಯ ವಿಭಾಗದಿಂದ 25,401 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಪಿಯುಸಿ ಪರೀಕ್ಷೆಗಳನ್ನು ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ರೋಲ್ ನಂಬರ್ ಆಧರಿಸಿ ತಮ್ಮ ಫಲಿತಾಂಶಗಳನ್ನು ಈ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ಪಿಯುಸಿ ಪರೀಕ್ಷೆಗಳನ್ನು ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ರೋಲ್ ನಂಬರ್ ಆಧರಿಸಿ ತಮ್ಮ ಫಲಿತಾಂಶಗಳನ್ನು ಈ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು.

ಫಲಿತಾಂಶ ನೋಡುವುದು ಹೇಗೆ?

  • https://karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಪಿಯುಸಿ ಪರೀಕ್ಷೆಯ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್​ ಮಾಡಿ.
  • ನೋಂದಣಿ ಸಂಖ್ಯೆ ಅಥವಾ ಜನ್ಮದಿನಾಂಕ ಮೂಲಕ ಪೋರ್ಟಲ್‌ಗೆ ಲಾಗ್ ಇನ್ ಮಾಡಿ.
  • ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
  • ನಿಮ್ಮ 2ನೇ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶಗಳು ನಿಮ್ಮ ಪರದೆಯ ಮೇಲೆ ಗೋಚರಿಸುತ್ತದೆ.
  • ವೆಬ್‌ಸೈಟ್‌ನಿಂದ ತಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಕೊಳ್ಳಿ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net