

ಬೆಂಗಳೂರು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರಲ್ಲಿ ಅನುತ್ತೀರ್ಣರಾಗಿರುವ ಹಾಗೂ ಲಿತಾಂಶ ಸುಧಾರಣೆ ಬಯಸುವ ವಿದ್ಯಾರ್ಥಿಗಳಿಗೆ ಜೂ.24ರಿಂದ ಮೇ 7ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪರೀಕ್ಷೆ ನಡೆಸುತ್ತಿದೆ.
ಪರೀಕ್ಷೆಗೆ ಕಲಾ ವಿಭಾಗದಿಂದ 30, 811, ವಿಭಾಗದಿಂದ 19,783 ಮತ್ತು ವಾಣಿಜ್ಯ ವಿಭಾಗದಿಂದ 25,401 ಅಭ್ಯರ್ಥಿಗಳಿದ್ದಾರೆ. 44,358 ಬಾಲಕರು ಮತ್ತು 31,637 ಬಾಲಕಿಯರು ಸೇರಿ 75,995 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ರಾಜ್ಯದ 248 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲ ಕೇಂದ್ರಗಳಲ್ಲಿಯೂ ಸಿಸಿಟಿವಿ ಅಳವಡಿಸಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ವಿಚಕ್ಷಣ ದಳಗಳನ್ನು ರಚಿಸಲಾಗಿದೆ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.