ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಫಲಿತಾಂಶ ವೀಕ್ಷಿಸಲು ಇಲ್ಲಿದೆ ಲಿಂಕ್

sslc result
Published on

ಬೆಂಗಳೂರು ರಾಜ್ಯಾದ್ಯಂತ ಮಾ.1ರಿಂದ 20ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಏ.8ರಂದು ಪ್ರಕಟವಾಗಲಿದೆ.

ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪ್ರಕಟಿಸಲಿದ್ದಾರೆ.

ಬಳಿಕ ಮಂಡಳಿ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ 1.30 ಗಂಟೆಗೆ ಪ್ರಕಟಿಸಲಾಗುತ್ತದೆ. ನಂತರ ಎಲ್ಲ ಕಾಲೇಜುಗಳ ಸೂಚನಾ ಲಕದಲ್ಲಿ ಪ್ರಕಟಿಸಲಾಗುತ್ತದೆ. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಮೊಬೈಲ್ ಸಂಖ್ಯೆಗೂ ಲಿತಾಂಶವನ್ನು ರವಾನಿಸಲಾಗುತ್ತದೆ.

ಅಭ್ಯರ್ಥಿಗಳು ಲಿತಾಂಶವನ್ನು ವೀಕ್ಷಿಸಲು ಮಂಡಳಿ ಜಾಲತಾಣ https://karresults.nic.in

ಭೇಟಿ ನೀಡಿ ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮದಿನಾಂಕವನ್ನು ದಾಖಲಿಸಿ ಲಿತಾಂಶವನ್ನು ವೀಕ್ಷಿಸಬಹುದು.

ಮಾ.1ರಿಂದ 20ರವರೆಗೆ ನಡೆದಿದ್ದ ಪರೀಕ್ಷೆಗೆ 7.13 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡು ಪರೀಕ್ಷೆ ಬರೆದಿದ್ದರು. ಇದೇ ಮೊದಲ ಬಾರಿಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆಯಲ್ಲಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಮತ್ತು ಸುಸೂತ್ರವಾಗಿ ನಡೆಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net