ಆ.21ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2: ಯಾರೆಗೆಲ್ಲ ಅನುಕೂಲ ಗೊತ್ತಾ?

exams
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಆ.21ರಿಂದ ಪೂರಕ ಪರೀಕ್ಷೆ-2 ಅನ್ನು ನಡೆಸುತ್ತಿದೆ.

ಪರೀಕ್ಷೆಗಳು ಪ್ರತಿ ದಿನ ಬೆಳಗ್ಗೆ 10.15ರಿಂದ 12.30ರ ವರೆಗೆ ಮತ್ತು ಮಧ್ಯಾಹ್ನ 2.15ರಿಂದ ಸಂಜೆ 5.30ರ ವರೆಗೆ ಎರಡು ಪಾಳಿಯಲ್ಲಿ ನಡೆಸಲಿದೆ. ಮೊದಲ ದಿನ ಕನ್ನಡ ಮತ್ತು ಅರೇಬಿಕ್ ಪರೀಕ್ಷೆಗಳು ನಡೆಯಲಿವೆ. ಸೆ.2ರ ವರೆಗೆ ಪರೀಕ್ಷೆ ನಡೆಯಲಿದೆ.

ಪರೀಕ್ಷೆಗೆ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷಾ ಮಂಡಳಿಯು ಪರೀಕ್ಷೆ ನಡೆಸಲು ಪ್ರಶ್ನೆಪತ್ರಿಕೆ, ಪರೀಕ್ಷಾ ಕೇಂದ್ರ, ಮೂಲ ಸೌಕರ್ಯ ಸೇರಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಇದೇ ಮೊದಲ ಬಾರಿಗೆ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ-2 ನಡೆಸುತ್ತಿದೆ. ಈ ಹಿಂದಿನ ಮುಖ್ಯ ಪರೀಕ್ಷೆ, ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿರುವ ಮತ್ತು ಖಾಸಗಿ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net