ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: 50,478 ವಿದ್ಯಾರ್ಥಿಗಳು ತೇರ್ಗಡೆ

Second PUC
Published on

ಬೆಂಗಳೂರು: ಮೇ/ಜೂನ್-2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು (ಜೂ.20) ಪ್ರಕಟವಾಗಿದೆ.

ಮೇ 23ರಿಂದ ಜೂ. 03ರವರೆಗೆ 304 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕಾ ಪರೀಕ್ಷೆ ನಡೆದಿತ್ತು. ಒಟ್ಟು 1,58,881 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 1,57,756 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 50,478 ವಿದ್ಯಾರ್ಥಿಗಳು ಮಾತ್ರ ತೇರ್ಗಡೆಯಾಗಿದ್ದಾರೆ.

ಇಂದು 3 ಗಂಟೆಗೆ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಉತ್ತರ ಪತ್ರಿಕೆಯ ಸ್ಕ್ಯಾನ್​ ಮಾಡಲಾದ ಪ್ರತಿಗಳು, ಮರು ಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಸಲ್ಲಿಸಲು ಬಯಸುವವರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಜೂ. 20 ರಿಂದ ಜೂ. 26ರ ಒಳಗೆ ಸಲ್ಲಿಸಬೇಕು. ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಯನ್ನು ದಿನಾಂಕ 24-06-2023 ರಿಂದ ದಿನಾಂಕ 28-06-2023 ರವರೆಗೆ https://kseab.karnataka.gov.in ಅಂತರ್ಜಾಲದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಸ್ಕ್ಯಾನಿಂಗ್ ಪ್ರತಿ ತೆಗೆದುಕೊಂಡವರಿಗೆ ಮಾತ್ರ ಮರುಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಲು ಜೂ. 24 ರಿಂದ ಜೂ. 30ರವರೆಗೆ ಅವಕಾಶವಿರುತ್ತದೆ. ಸ್ಕ್ಯಾನಿಂಗ್​ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ಹಾಗೂ ಹಾಗೂ ಮರುಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂ. ವಿಧಿಸಲಾಗಿದೆ.

Second PUC Supplementary Examination result
Second PUC Supplementary Examination result 2
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net