ದ್ವಿತೀಯ ಪಿಯು ಪರೀಕ್ಷೆ ನೋಂದಣಿ: ಸಮಯ ಕಡಿತಗೊಳಿಸಿದ ಪರೀಕ್ಷಾ ಮಂಡಳಿ

sslc board
Published on

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ಕ್ಕೆ ನೋಂದಣಿಗೆ ನಿಗದಿಯಾಗಿದ್ದ ಸಮಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಕಡಿತಗೊಳಿಸಿದೆ. ಈ ಮೊದಲು ಡಿ.20ರ ವರೆಗಿದ್ದ ಅವಧಿಯನ್ನು ಡಿ.16ರ ವರೆಗೆ ಮಾತ್ರ ಅವಕಾಶ ನೀಡಿದೆ.

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ವಿದ್ಯಾರ್ಥಿಗಳ ದತ್ತಾಂಶವಿಲ್ಲದೆ ಪರೀಕ್ಷಾ ಕೇಂದ್ರಗಳನ್ನು ಅಂತಿಮಗೊಳಿಸಲು ಸಾಧ್ಯವಿಲ್ಲ. ಸಮಯ ಕಡಿಮೆ ಇರುವ ಹಿನ್ನೆಲೆಯಲ್ಲಿ ಡಿ.16ರ ವರೆಗೆ ಮಾತ್ರ ಮಾಹಿತಿ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net