

ಸೋಮವಾರಪೇಟೆ: ಜ್ಞಾನವಿಕಾಸ ಆಂಗ್ಲ ಮಾದ್ಯಮ ಶಾಲೆಯ ಇಕೋ ಕ್ಲಬ್ ವತಿಯಿಂದ ತಾಯಿ ಹೆಸರಿನಲ್ಲಿ ಒಂದು ಸಸಿ ಹಾಗೂ ಬೀಜದುಂಡೆ ಅರಣ್ಯದಲ್ಲಿ ಎಸೆಯುವ ಕಾರ್ಯಕ್ರಮ ತಾಲೂಕಿನ ಯರಪಾರೆ ಅರಣ್ಯದಲ್ಲಿ ಇತ್ತೀಚೆಗೆ ನಡೆಯಿತು.
ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಶೈಲೇಂದ್ರಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಈವತ್ತು ನೆಟ್ಟ ಸಸಿ ಮುಂದಿನ ಪೀಳಿಗೆಗೆ ವರದಾನವಾಗಲಿದೆ. ಗಿಡ ಮರಗಳಿಂದ ಜೀವಸಂಕುಲಕ್ಕೆ ಬೇಕಾದ ಆಮ್ಲಜನಕ ಸಿಗುತ್ತದೆ. ಉತ್ತಮವಾಗಿ ಮಳೆ ಬಿದ್ದು ಇಡೀ ನಾಡು ಸಮೃದ್ಧವಾಗಿರುತ್ತದೆ ಎಂದರು.
ಶಾಲಾ ಮುಖ್ಯಶಿಕ್ಷಕಿ ಎಂ.ಜೆ.ಅಣ್ಣಮ್ಮ, ಅರಣ್ಯ ಇಲಾಖೆಯ ಸಿಬ್ಬಂದಿ ಶ್ರವಣ್, ಲೋಹಿತ್, ಕಿರಣ್ ಹಾಗೂ ವಿದ್ಯಾರ್ಥಿಗಳು ಇದ್ದರು.
ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ತೀರ್ಥ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಜಿ.ಐಶ್ವರ್ಯಾ, ಆರೋಗ್ಯ ಕಾರ್ಯಕರ್ತೆಯರಾದ ಅನಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಸಾವಿತ್ರಿ, ಸ್ತ್ರೀಶಕ್ತಿ ಸದಸ್ಯರು, ಅಂಗನವಾಡಿ ಶಿಕ್ಷಕಿ ತಾರಾ ಲೋಬೋ ಇದ್ದರು. ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸಲಾಯಿತು