ಸಸಿ ನೆಟ್ಟು ಪರಿಸರ ದಿನ ಆಚರಣೆ

HUN-JUNE-12-3(COURT PROGRAMME)
Published on

ಹುಣಸೂರು: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ(ಪ್ರಾದೇಶಿಕ ವಿಭಾಗ)ಸಹಯೋಗದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ನ್ಯಾಯಾಲಯ ಆವರಣದಲ್ಲಿ ಸಸಿ ನೆಡಲಾಯಿತು.

ಎಂಟನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಧುಸೂಧನ್, ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಕೆ.ಎಂ.ಶಂಕರ್, ಜಿ.ದೀಪಾ, ಸಿವಿಲ್ ನ್ಯಾಯಾಧೀಶರಾದ ಗಿರೀಶ್ ಚಟ್ನಿ, ಸಣ್ಣಹನುಮಗೌಡರು ವಿವಿಧ ಜಾತಿಯ 14 ಗಿಡಗಳನ್ನು ನೆಟ್ಟರು. ಬಳಿಕ ಪರಿಸರ ಸಂರಕ್ಷಣೆ ಕುರಿತಾಗಿ ಎಲ್ಲರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಪ್ರಾದೇಶಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಸಂದೀಪ್, ಉಪ ವಲಯ ಅರಣ್ಯಾಧಿಕಾರಿ ಮಲ್ಲಿಕಾರ್ಜುನ ಹಾಗೂ ನ್ಯಾಯಾಲಯ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net