ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

manjula madar
Published on

ಹುಬ್ಬಳ್ಳಿ: ಧಾರವಾಡದಲ್ಲಿ ಇತ್ತೀಚೆಗೆ ಜರುಗಿದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿಯ ಮಹಿಳಾ ವಿದ್ಯಾ ಪೀಠದ ಬಾಲಕಿಯರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮಂಜುಳಾ ಮಾದರ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

17 ವರ್ಷದೊಳಗಿನ ಬಾಲಕಿಯ ವಿಭಾಗದ ಬಲ್ಲೆ ಎಸೆತ ಸ್ಪರ್ಧೆಯಲ್ಲಿ ಮಂಜುಳಾ ಪ್ರಥಮ ಸ್ಥಾನ ಪಡೆದಿದ್ದಳು. ದೈಹಿಕ ಶಿಕ್ಷಣ ಶಿಕ್ಷಕಿ ಬಿ.ಆರ್. ರಾಚಪ್ಪನವರ ತರಬೇತಿ ನೀಡಿದ್ದರು. ವಿದ್ಯಾರ್ಥಿನಿ ಸಾಧನೆಗೆ ಸಂಸ್ಥೆ ಅಧ್ಯಕ್ಷ ಬಸಂತಕುಮಾರ ಪಾಟೀಲ, ಉಪಾಧ್ಯಕ್ಷ ಕೀರ್ತಿ ತಂಬದ, ಜಂಟಿ ಕಾರ್ಯದರ್ಶಿ ಜ್ಯೋತಿ ಜಂಗಣ್ಣವರ, ಮುಖ್ಯಾಧ್ಯಾಪಕ ಎನ್.ಐ. ತಳವಾರ ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net