ಜು.29ರಿಂದ ಆ.12ರವರೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ

ರಾಜ್ಯದ 31 ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಅಧ್ಯಕ್ಷರ ಹುದ್ದೆ ಆಯ್ಕೆಗಾಗಿ ‘ಸಂಘಟನ್ ಸೃಜನ್ ಅಭಿಯಾನ್’ ನಡೆಯಲಿದ್ದು, ದ.ಕ. ಜಿಲ್ಲೆಯಲ್ಲಿ ಜು. 29ರಿಂದ ಆ. 12ರವರೆಗೆ ಈ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಹಾಲಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯದ 31 ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಅಧ್ಯಕ್ಷರ ಹುದ್ದೆ ಆಯ್ಕೆಗಾಗಿ ‘ಸಂಘಟನ್ ಸೃಜನ್ ಅಭಿಯಾನ್’ ನಡೆಯಲಿದ್ದು, ದ.ಕ. ಜಿಲ್ಲೆಯಲ್ಲಿ ಜು. 29ರಿಂದ ಆ. 12ರವರೆಗೆ ಈ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಹಾಲಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
Published on
ಮಂಗಳೂರು: ರಾಜ್ಯದ 31 ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಅಧ್ಯಕ್ಷರ ಹುದ್ದೆ ಆಯ್ಕೆಗಾಗಿ ‘ಸಂಘಟನ್ ಸೃಜನ್ ಅಭಿಯಾನ್’ ನಡೆಯಲಿದ್ದು, ದ.ಕ. ಜಿಲ್ಲೆಯಲ್ಲಿ ಜು. 29ರಿಂದ ಆ. 12ರವರೆಗೆ ಈ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಹಾಲಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಪ್ರಕ್ರಿಯೆ ನಡೆಸಲು ಎಐಸಿಸಿ ವೀಕ್ಷಕರಾಗಿ ಕೋಝಿಕೋಡ್‌ನ ಶಾಸಕ ಜಯಂತ್ ನೇತೃತ್ವದಲ್ಲಿ ಕೆಪಿಸಿಸಿಯ ನಾಲ್ವರು ಸದಸ್ಯರನ್ನು ಒಳಗೊಂಡ ಸಮಿತಿಯು ಜು. 28ರಂದು ಪ್ರಕ್ರಿಯೆಗೆ ಚಾಲನೆ ನೀಡಲಿದೆ ಎಂದರು.
ಸಮಿತಿಯು ಜು. 28ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್‌ಗೆ ಕಚೇರಿಗೆ ಭೇಟಿ ನೀಡಲಿದ್ದು, 10.30ಕ್ಕೆ ಪ್ರತಿನಿಧಿಗಳ ಜತೆ ಹಾಗೂ ಸರ್ವ ಸದಸ್ಯರ ಸಭೆ ನಡೆಸಲಿದೆ. ಮಧ್ಯಾಹ್ನದ ಬಳಿಕ ಶಾಸಕರು, ಮಾಜಿ ಶಾಸಕರು ಪದಾಧಿಕಾರಿಗಳನ್ನು ಭೇಟಿ ಕಾರ್ಯ ನಡೆಯಲಿದೆ. ಜು. 29ರಿಂದ ಈ ಸಮಿತಿಯು 8 ವಿಧಾನಸಭಾ ಕ್ಷೇತ್ರಗಳಲ್ಲಿರುವ 17 ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸಲಿದೆ. ಆ.11ರವರೆಗೆ ಈ ಅಭಿಪ್ರಾಯ ಸಂಗ್ರಹ ಪ್ರತಿ ಬ್ಲಾಕ್ ಸಮಿತಿಯಲ್ಲಿ ನಡೆಸಿ, ಆ.12ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಲ್ಲಿ ಆಸಕ್ತ ಸಮಾನ ಮನಸ್ಕರಿಗೆ ಪಕ್ಷದ ಚಟುವಟಿಕೆಗಳ ಬಗ್ಗೆ ಅಹವಾಲು ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಬಳಿಕ ಸಮಿತಿಯು ತಳಮಟ್ಟದ ಸದಸ್ಯರಿಂದ ವ್ಯಕ್ತವಾದ ಅಭಿಪ್ರಾಯಗಳನ್ನು ಕ್ರೋಢೀಕರಿಸಿಕೊಂಡು ಸಲ್ಲಿಕೆಯಾದ ಅರ್ಜಿಗಳಲ್ಲಿ 3ರಿಂದ 6 ಹೆಸರುಗಳನ್ನು ಪಕ್ಷದ ಅಧ್ಯಕ್ಷ ಹುದ್ದೆಗಾಗಿ ಆಯ್ಕೆ ಮಾಡಿ ಹೈಕಮಾಂಡ್‌ಗೆ ಸಲ್ಲಿಸಲಿದೆ. ಒಟ್ಟು ಈ ಪ್ರಕ್ರಿಯೆ ಒಂದು ತಿಂಗಳ ಅವಧಿಯಲ್ಲಿ ನಡೆದು ಹೊಸ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ ಎಂದರು.
ಹಾಲಿ ಐದು ವರ್ಷಗಳ ಕಾಲ ಅಧ್ಯಕ್ಷರಾಗಿದ್ದವರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಪಕ್ಷದಿಂದ ಯಾರೂ ಕೂಡಾ ಸ್ಪರ್ಧೆ ಮಾಡಬಹುದಾಗಿದ್ದು, ಕೇವಲ ಅರ್ಜಿಯ ಆಧಾರದಲ್ಲಿ ಮಾತ್ರವಲ್ಲದೆ, ಸಮಿತಿಯು ತಮ್ಮ ಭೇಟಿಯ ಸಂದರ್ಭ ಪಕ್ಷದ ತಳಮಟ್ಟದಿಂದ ವ್ಯಕ್ತವಾದ ಅಭಿಪ್ರಾಯಗಳ ಆಧಾರದಲ್ಲಿಯೂ ಅರ್ಹ ವ್ಯಕ್ತಿಗಳನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೂಚಿಸಬಹುದಾಗಿದೆ ಎಂದು ಅವರು ಹೇಳಿದರು.
ಮುಖಂಡರಾದ ಅಪ್ಪಿ, ಸ್ಟಾೃನಿ ಅಲ್ವಾರಿಸ್, ಸದಾಶಿವ ಉಳ್ಳಾಲ್, ವಿಕಾಸ್ ಶೆಟ್ಟಿ, ಲಾವಣ್ಯ ಬಳ್ಳಾಲ್, ಶುಭೋದಯ ಆಳ್ವ, ಎಂ.ಎಸ್. ಮುಹಮ್ಮದ್, ಸುರೇಂದ್ರ ಕಾಂಬ್ಳಿ, ಟಿ.ಕೆ. ಸುಧೀರ್, ಉಷಾ ಅಂಚನ್, ಸಾರಿಕಾ ಪೂಜಾರಿ, ಲಾರೆನ್ಸ್ ಮೊದಲಾದವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net