ರಾಷ್ಟ್ರೀಯ ಕ್ಯಾನ್ಸರ್ ಸರ್ವೈವರ್ಸ್ ಡೇ ಮೊದಲಿಗೆ ಅಮೆರಿಕದಲ್ಲಿ ಪ್ರಾರಂಭವಾಯಿತು. ಈಗ ಐದು ಖಂಡಗಳಲ್ಲಿ ಆಚರಿಸಲಾಗುತ್ತದೆ. ಭಾರತ, ಕೀನ್ಯಾ, ಬಹಾಮಾಸ್, ಕೆನಡಾ, ಮಲಾವಿ, ಮಾಲ್ಟಾ, ನೈಜೀರಿಯಾ, ರುವಾಂಡಾ, ದಕ್ಷಿಣ ಆಫ್ರಿಕಾ, ಥೈಲ್ಯಾಂಡ್, ಯು.ಎಸ್.ಎ, ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ 20ಕ್ಕೂ ಹೆಚ್ಚು ದೇಶಗಳಲ್ಲಿ ಈ ದಿನವನ್ನು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಆಚರಿಸುತ್ತಾರೆ.