ಪೊಲೀಸರಿಗೆ ಗಲಭೆ ನಿಯಂತ್ರಣ ತರಬೇತಿ

12 BIRUR 02
ಬೀರೂರಿನ ಖಾಸಗಿ ಬಸ್‌ನಿಲ್ದಾಣದಲ್ಲಿ ಮಂಗಳವಾರ ಪೊಲೀಸ್ ಇಲಾಖೆಯಿಂದ ಗಲಭೆ ನಿಯಂತ್ರಣ ತರಬೇತಿ ನಡೆಯಿತು.
Published on

ಬೀರೂರು: ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಶಿಸ್ತು ಮತ್ತು ಸಂಯಮ ಮೀರದೆ ಅತಿಕ್ರಮಣ ಮಾಡಿದವರನ್ನು ನಿಯಂತ್ರಿಸಲು ಅನುಸರಿಸಬೇಕಾದ ಕಾರ್ಯ ವಿಧಾನದ ಬಗ್ಗೆ ಪೊಲೀಸ್ ಇಲಾಖೆಯಿಂದ ಬೀರೂರಿನ ಖಾಸಗಿ ಬಸ್‌ನಿಲ್ದಾಣದಲ್ಲಿ ಮಂಗಳವಾರ ಗಲಭೆ ನಿಯಂತ್ರಣ ತರಬೇತಿ ಹಮ್ಮಿಕೊಳ್ಳಲಾಗಿತ್ತು.
ಪಿಎಸ್‌ಐ ಸಚಿತ್ ಕುಮಾರ್ ಮಾತನಾಡಿ, ಗಣೇಶ ಚತುರ್ಥಿ ಹಾಗೂ ಈದ್‌ಮಿಲಾದ್ ಅಂಗವಾಗಿ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ತುರ್ತು ಸಂದರ್ಭಗಳಲ್ಲಿ ಜನರ ಆಸ್ತಿಪಾಸ್ತಿ, ಮಾನ ಪ್ರಾಣಗಳ ಸಂರಕ್ಷತೆ ಕಾಪಾಡಲು ಪೊಲೀಸರಿಗೆ ವಿಶೇಷ ತರಬೇತಿ ನೀಡಲಾಗಿದೆ. ಹಬ್ಬದ ಆಚರಣೆಗಳ ಸಂದರ್ಭದಲ್ಲಿ ಶಾಂತಿ ಕದಡುವ ಕಿಡಿಗೇಡಿಗಳನ್ನು ನಿಯಂತ್ರಿಸುವ ಕಾರ್ಯ ವಿಧಾನದ ಬಗ್ಗೆ ತರಬೇತಿ ನೀಡಲಾಗುತ್ತಿದೆ ಎಂದರು. ಪೊಲೀಸ್ ಅಪರಾಧ ವಿಭಾಗದ ಪಿಎಸ್‌ಐ ಮಂಜುಳಾಬಾಯಿ, ಎಎಸ್‌ಐ ತಿಪ್ಪೇಶ್, ನಾಗೇಗೌಡ್ರು, ಸಿಬ್ಬಂದಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net