ನಕಲಿ ಬಟ್ಟೆ ಮಾರಾಟ, ಒರ್ವನ ಬಂಧನ

Arrest Kaidhi
ಆದಿವಾಸಿ ಯುವಕನ ಬಂಧನ
Published on

ಬೆಂಗಳೂರು: ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ರಾಜರಾಜೇಶ್ವರಿನಗರ ನಿವಾಸಿ ನರಸಿಂಹರಾಜು (೩೮) ಬಂಧಿತ. ಆರೋಪಿಯಿಂದ ೧.೩೮ ಕೋಟಿ ರೂ. ಮೌಲ್ಯದ ಕಳಪೆ ಗುಣಮಟ್ಟದ ಬಟ್ಟೆಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿ ಪ್ರತಿಷ್ಠಿತ ನೈಕಿ, ಪೂಮಾ, ಅಡಿದಾಸ್ ಸೇರಿ ಆರು ಕಂಪನಿಗಳ ಹೆಸರಿನಲ್ಲಿ ಕಳಪೆ ಗುಣಮಟ್ಟದ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದ. ಈ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಬಿಇಎಂಎಲ್ ಲೇಔಟ್‌ನಲ್ಲಿರುವ ಆತನ ಅಂಗಡಿ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ನಕಲಿ ಬಟ್ಟೆಗಳನ್ನು ಅಸಲಿ ಕಂಪನಿಯ ಬಟ್ಟೆಗಳೆಂದು ಮಾರಾಟ ಮಾಡುತ್ತಿದ್ದ ಎಂಬುದು ಗೊತ್ತಾಗಿದೆ. ಆರೋಪಿಯ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಹಕ್ಕುಸ್ವಾಮ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net