

ಬೆಂಗಳೂರು: ಸಿಗ್ನಲ್ ಆ್ಯಪ್ ಬಳಸಿಕೊಂಡು ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಕೇರಳದ ಪೆಡ್ಲರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿ 10.5 ಲಕ್ಷ ರೂ.ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
ಸಿಗ್ನಲ್ ಆ್ಯಪ್ ಬಳಸಿಕೊಂಡು ವಿದೇಶಿ ಪೆಡ್ಲರ್‌ನಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿ ಮಾಡುತ್ತಿದ್ದ ಕೇರಳದ ಪೆಡ್ಲರ್, ಸ್ಥಳೀಯ ಮತ್ತು ಪರಿಚಯಸ್ಥರಿಗೆ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಮಾ.27ರಂದು ವರ್ತೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. 10.5 ಲಕ್ಷ ರೂ. ಮೌಲ್ಯದ 5 ಕೆಜಿ 180 ಗ್ರಾಂ ಗಾಂಜಾ ಜಪ್ತಿ ಮಾಡಿದ್ದು, ವರ್ತೂರು ಪೊಲೀಸ್ ಠಾಣೆಯಲ್ಲಿ ಎ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.