ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಕೂಡಲೇ ಜಿಲ್ಲೆಗಳಿಗೆ ಕಳುಹಿಸಿ

ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯನ್ನು ಎದುರಿಸಲು ಮತ್ತು ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಕೂಡಲೇ ಆಯಾ ಜಿಲ್ಲೆಗಳಿಗೆ ಕಳುಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯನ್ನು ಎದುರಿಸಲು ಮತ್ತು ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಕೂಡಲೇ ಆಯಾ ಜಿಲ್ಲೆಗಳಿಗೆ ಕಳುಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
Published on
ಮಂಗಳೂರು: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯನ್ನು ಎದುರಿಸಲು ಮತ್ತು ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಕೂಡಲೇ ಆಯಾ ಜಿಲ್ಲೆಗಳಿಗೆ ಕಳುಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಂಗಳೂರಿನ ಸರ್ಕಿಟ್ ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರುಗಳು ಬರೀ ಕಾಟಾಚಾರಕ್ಕೆ ಸಭೆಗಳನ್ನು ನಡೆಸಿ ಹೋಗುತ್ತಿದ್ದಾರೆ. ಇಂದಿನ ಪರಿಸ್ಥಿತಿಯಲ್ಲಿ ಒಬ್ಬೊಬ್ಬ ಸಚಿವರಿಗೆ ನಾಲ್ಕೈದು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ಇದರಿಂದಾಗಿ ಅವರಿಗೆ ಎಲ್ಲಾ ಜಿಲ್ಲೆಗಳ ಕಡೆಗೆ ಗಮನಹರಿಸಿ, ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇಂತಹ ಕಠಿಣ ಸಮಯದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ತಕ್ಷಣವೇ ಜಿಲ್ಲೆಗಳಿಗೆ ಕಳುಹಿಸಿ, ಅವರು ಸ್ಥಳದಲ್ಲೇ ಇದ್ದು ಕಾರ್ಯಪ್ರವೃತ್ತರಾಗುವಂತೆ ಸರ್ಕಾರ ಆದೇಶಿಸಬೇಕು ಎಂದರು.
ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಬರ ಅಧ್ಯಯನ ಸಮಿತಿಯನ್ನು ಕಳುಹಿಸುವಂತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ವಿನಂತಿಸಿರುವುದು ಸ್ವಾಗತಾರ್ಹ. ಆದರೆ, ಕೇಂದ್ರದ ತಂಡ ಬರುವವರೆಗೂ ರಾಜ್ಯ ಸರ್ಕಾರ ಕೈಕಟ್ಟಿ ಕುಳಿತುಕೊಳ್ಳುವುದು ಸರಿಯಲ್ಲ. ಅದರ ಬದಲಿಗೆ ತಕ್ಷಣವೇ ರಾಜ್ಯಮಟ್ಟದ ಸಮಿತಿಯೊಂದನ್ನು ರಚಿಸಿ, ಪೀಡಿತ ಪ್ರದೇಶಗಳಲ್ಲಿ ಅಧ್ಯಯನ ನಡೆಸಬೇಕು. ಕಳೆದ ವರ್ಷ ಇದೇ ಅವಧಿಯಲ್ಲಿ ಭರ್ತಿಯಾಗಿದ್ದ ಜಲಾಶಯಗಳು ಈ ಬಾರಿ ಖಾಲಿಯಾಗಿವೆ. ಬರಗಾಲ ಆವರಿಸುವ ಮುನ್ಸೂಚನೆ ಮೊದಲೇ ಇದ್ದರೂ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಲ್ಲಿ ಮತ್ತು ಬರ ಎದುರಿಸುವ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಲ್ಲಿ ಸರ್ಕಾರ ಸಂಪೂರ್ಣವಾಗಿ ಹಿಂದುಳಿದಿದೆ ಎಂದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಮುಖಂಡರಾದ ಶಶಿರಾಜ್ ಶೆಟ್ಟಿ ಕೊಳಂಬೆ, ಅಕ್ಷಿತ್ ಸುವರ್ಣ, ಯೋಗೀಶ್ ಶೆಟ್ಟಿ ಜೆಪ್ಪು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
----------------------
ಉಳ್ಳಾಲ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರವೇ ಇಲ್ಲ ಏಕೆ?
ಕ್ಷೇತ್ರದ ಶಾಸಕ ಹಾಗೂ ಸಚಿವ ಯು.ಟಿ. ಖಾದರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಭೋಜೇಗೌಡರು, ಉಳ್ಳಾಲದಲ್ಲಿ ಪ್ರತಿ ವರ್ಷವೂ ತೀವ್ರ ಕಡಲ್ಕೊರೆತ ಸಂಭವಿಸುತ್ತಿದ್ದು, ಹತ್ತಾರು ಮನೆಗಳು ಕಡಲ ಪಾಲಾಗುತ್ತಿವೆ. ಯು.ಟಿ. ಖಾದರ್ ಮತ್ತು ಅವರ ಕುಟುಂಬವೇ ಕಳೆದ ಒಂಬತ್ತು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದೆ. ಆದರೂ ಇಲ್ಲಿನ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಏಕೆ ಸಾಧ್ಯವಾಗಿಲ್ಲ. ಮುಂಬಯಿ ಮತ್ತು ಉಡುಪಿಯ ಮಲ್ಪೆಯಲ್ಲಿ ಕಡಲ್ಕೊರೆತವನ್ನು ಯಶಸ್ವಿಯಾಗಿ ತಡೆಗಟ್ಟಲಾಗಿದೆ. ಆದರೆ ಇಲ್ಲಿ ಮಾತ್ರ ಪ್ರತಿ ವರ್ಷ ಕಲ್ಲುಗಳನ್ನು ಸುರಿಯುವ ತೋರಿಕೆಯ ಕೆಲಸ ನಡೆಯುತ್ತಿದೆಯೇ ಹೊರತು ಶಾಶ್ವತ ಪರಿಹಾರ ಸಿಗುತ್ತಿಲ್ಲ. ಜನರ ಜೀವಕ್ಕೆ ಬೆಲೆ ಇಲ್ಲವೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net